Mon. Jan 6th, 2025

Bantwal: ಇಡಿ ಅಧಿಕಾರಿಗಳೆಂದು ನಂಬಿಸಿ ಉದ್ಯಮಿಯ ಮನೆಗೆ ಎಂಟ್ರಿ – ಉದ್ಯಮಿಯಿಂದ 30 ಲಕ್ಷ ದೋಚಿ ಪರಾರಿ!!

ಬಂಟ್ವಾಳ: (ಜ.4) ಇಡಿ ಅಧಿಕಾರಿಗಳೆಂದು ನಂಬಿಸಿ ಉದ್ಯಮಿಯ ಮನೆಗೆ ಎಂಟ್ರಿ ಕೊಟ್ಟು ಬರೋಬ್ಬರಿ 30 ಲಕ್ಷ ಲೂಟಿ ಮಾಡಿದ ಘಟನೆ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ನಡೆದಿದೆ.

ಇದನ್ನೂ ಓದಿ: ಬೆಳ್ತಂಗಡಿ: ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ಬ್ರಹ್ಮಕಲಶೋತ್ಸವದ ಸಕಲ ಸಿದ್ಧತೆಗಳನ್ನು ವೀಕ್ಷಿಸಿದ ಶರತ್ ಕೃಷ್ಣ ಪಡ್ವೆಟ್ನಾಯ

ಬಂಟ್ವಾಳ ತಾಲೂಕಿನ ವಿಟ್ಲ ಪೋಲಿಸ್‌ ಠಾಣಾ ವ್ಯಾಪ್ತಿಯ ಬೋಳಂತೂರು ಸಮೀಪದ ನಾರ್ಶ ನಿವಾಸಿ ಸುಲೈಮಾನ್‌ ಹಾಜಿಯವರು ಸಿಂಗಾರಿ ಬೀಡಿ ಸಂಸ್ಥೆಯನ್ನು ಅನೇಕ ವರ್ಷಗಳಿಂದ ನಡೆಸುತ್ತಿದ್ದಾರೆ. ತಡರಾತ್ರಿ ಸುಲೈಮಾನ್‌ ಅವರ ಮನೆಗೆ ತಮಿಳುನಾಡು ಮೂಲದ ಕಾರಿನಲ್ಲಿ ಆಗಮಿಸಿದ ತಂಡವೊಂದು ದಿಢೀರ್‌ ದಾಳಿ ನಡೆಸಿದೆ. ನಾವು ಇಡಿ ಅಧಿಕಾರಿಗಳು ಎಂದು ನಂಬಿಸಿ ಸುಮಾರು ಎರಡು ಗಂಟೆಗಳವರೆಗೆ ತನಿಖೆ ನಡೆಸಿದೆ.

ಮನೆಯಲ್ಲಿದ್ದ ಸುಮಾರು 30 ಲಕ್ಷ ರೂಪಾಯಿಗಳನ್ನು ದೋಚಿ ತಂಡ ಪರಾರಿಯಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೋಲಿಸರು ಭೇಟಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *