ಬೆಳ್ತಂಗಡಿ:(ಜ.4) ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಜ.7 ರಿಂದ ಜ.12 ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದೆ. ಬ್ರಹ್ಮಕಲಶೋತ್ಸವಲಕ್ಕೆ ಸಕಲ ಸಿದ್ಧತೆಗಳು ಭರದಿಂದ ಸಾಗುತ್ತಿವೆ.
ಇದನ್ನೂ ಓದಿ: ಪದ್ಮುಂಜ : ಪದ್ಮುಂಜ ಪ್ರಾಥಮಿಕ ಸಹಕಾರ ಸಂಘ (ನಿ.) ಆಡಳಿತ ಮಂಡಳಿ ಚುನಾವಣೆಯಲ್ಲಿ
ಜ.3 ರಂದು ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಉಜಿರೆ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಗೌರವ ಮಾರ್ಗದರ್ಶಕರಾದ ಶರತ್ ಕೃಷ್ಣ ಪಡ್ವೆಟ್ನಾಯ ರವರು ಭೇಟಿ ನೀಡಿ ಎಲ್ಲಾ ಸಕಲ ಸಿದ್ಧತೆಗಳನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಶರತ್ ಕೃಷ್ಣ ಪಡ್ವೆಟ್ನಾಯ ರವರು ಸಮಿತಿಯವರೊಂದಿಗೆ ಚರ್ಚಿಸಿ ಹಲವು ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಪ್ರಧಾನ ಸಂಚಾಲಕರಾದ ಬಾಲಕೃಷ್ಣ ಪೂಜಾರಿ ಬಜಗುತ್ತು ಉಪಸ್ಥಿತರಿದ್ದರು.