Tue. Jan 7th, 2025

Kolar: ಹೆಂಡತಿ ಇದ್ದರೂ, ಹೆಂಡ್ತಿ ಆರೋಗ್ಯ ವಿಚಾರಿಸಲು ಬಂದಿದ್ದ ಯುವತಿ ಮೇಲೆ ಬಿತ್ತು ಕಣ್ಣು – ಪ್ರೇಯಸಿಯ ಮನೆಯಿಂದ ಬರುತ್ತಿದ್ದ ಯುವಕನನ್ನು ಅಟ್ಟಾಡಿಸಿ ಕೊಲೆ!!

ಕೋಲಾರ (ಜ.05): ವಿವಾಹಿತ ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯ ಮನೆಗೆ ಹೋಗಿ ಹಿಂತಿರುಗುತ್ತಿದ್ದಾಗ ಆಕೆಯ ಕುಟುಂಬಸ್ಥರು ಹಾಗೂ ಸ್ಥಳೀಯರು ಅಟ್ಟಾಡಿಸಿ ಹೊಡೆದು ಹತ್ಯೆಗೈದ ಘಟನೆ ಕೋಲಾರದ ನೂರ್ ನಗರದಲ್ಲಿ ಶನಿವಾರ ಮಧ್ಯರಾತ್ರಿ ನಡೆದಿದೆ.

ಇದನ್ನೂ ಓದಿ: ಕಾಸರಗೋಡು : ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರ ಅವಳಿ ಕೊಲೆ ಪ್ರಕರಣ

ಕೊಲೆಯಾದ ವ್ಯಕ್ತಿಯನ್ನು ಉಸ್ಮಾನ್ ಎಂದು ಗುರುತಿಸಲಾಗಿದೆ. ಆತ ತನ್ನ ಪ್ರೇಯಸಿ ಮನೆಗೆ ಹೋಗಿ ಬರುವಾಗ ಆಕೆಯ ಕುಟುಂಬಸ್ಥರು ಹಾಗೂ ಸ್ಥಳೀಯರು ಅಟ್ಟಾಡಿಸಿ ಹೊಡೆದಿದ್ದಾರೆ. ಬಳಿಕ ಪೊಲೀಸರು ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಸಾವನ್ನಪ್ಪಿದ್ದಾನೆ.

ಉಸ್ಮಾನ್ ಕಳೆದೆ ಐದು ವರ್ಷಗಳ ಹಿಂದೆ ಜಬೀನ್ ಎಂಬಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದ. ಆಕೆಗೆ ಕಿಡ್ನಿ ವಿಫಲವಾಗಿ ಅನಾರೋಗ್ಯದಿಂದ ಬಳಲುತ್ತಿದ್ದು, ಈ ವೇಳೆ ಆರೋಗ್ಯ ವಿಚಾರಿಸಲು ಬಂದಿದ್ದ ಜಬೀನಾ ಸಂಬಂಧಿ ಯುವತಿಯೊಂದಿಗೆ ಉಸ್ಮಾನ್‍ಗೆ ಪ್ರೀತಿಯಾಗಿದೆ. ಈ ವಿಷಯ ತಿಳಿದು ಆತನ ಪತ್ನಿ ಮಹಿಳಾ ಠಾಣೆಗೆ ದೂರು ನೀಡಿದ್ದಳು. ಬಳಿಕ ತನ್ನ ಪತಿಯಿಂದ ದೂರಾಗಿ ತವರು ಮನೆ ಸೇರಿದ್ದಳು.

ಹೀಗಿರುವಾಗ ಕಳೆದ ರಾತ್ರಿ ಉಸ್ಮಾನ್ ಯುವತಿ ಮನೆಗೆ ಹೋಗಿ ಅವರಿಗೆ ಅವಾಜ್ ಹಾಕಿದ್ದಾನಂತೆ. ಮಗಳನ್ನು ಮದುವೆ ಮಾಡಿಕೊಡಿ ಎಂದು ಹೇಳಿದ್ದಾನೆ.

ಈ ವೇಳೆ ಒಂದಿಷ್ಟು ಜಗಳವಾಗಿದೆ. ಬಳಿಕ ಅಲ್ಲಿಂದ ಆತ ಹೊರಟಿದ್ದ ಉಸ್ಮಾನ್ ನನ್ನು ಹುಡುಗಿ ಕಡೆಯವರು ಹಿಂಬಾಲಿಸಿಕೊಂಡು ಹೋಗಿ ನೂರ್ ನಗರ ಸಮೀಪ ಹಿಡಿದು ಹಲ್ಲೆ ಮಾಡಿದ್ದಾರೆ. ಸ್ಥಳೀಯರು ಜಮಾಯಿಸುತ್ತಿದ್ದಂತೆ ಬಿಟ್ಟು ಹೋಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ, ಚಿಕಿತ್ಸೆ ಫಲಿಸದೆ ಉಸ್ಮಾನ್ ಮೃತಪಟ್ಟಿದ್ದಾನೆ.

Leave a Reply

Your email address will not be published. Required fields are marked *