ಚಾರ್ಮಾಡಿ,ಜ.06( ಯು ಪ್ಲಸ್ ಟಿವಿ): ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ಚಾರ್ಮಾಡಿಯಲ್ಲಿರುವ ಮೃತ್ಯುಂಜಯ ನದಿಗೆ ಗೋಮಾಂಸ ಹಾಗೂ ದನದ ಇತರ ತ್ಯಾಜ್ಯಗಳನ್ನು ಹಾಕಿ ನದಿಯನ್ನು ಅಪವಿತ್ರಗೊಳಿಸಿದ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಅಗ್ರಹಿಸಿ ಇಂದು ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಇದನ್ನೂ ಓದಿ: ಉಡುಪಿ: ಇನ್ ಸ್ಟಾಗ್ರಾಂ ಲಿಂಕ್ ಕ್ಲಿಕ್ ಮಾಡಿ 12.46 ಲಕ್ಷ ರೂ. ಕಳೆದುಕೊಂಡ ಯುವತಿ !!!
ಇನ್ನು ಇದೇ ವೇಳೆ ಪ್ರತಿಭಟನಾಕಾರರು ಚಾರ್ಮಾಡಿ ಪಂಚಾಯಿತಿಗೆ ತೆರಳಿ ಮನವಿ ಸಲ್ಲಿಸಿದರು. ಈ ಸಂದರ್ಭ ವೇದಿಕೆಯಲ್ಲಿ ಬಜರಂಗದಳ, ವಿಶ್ವ ಹಿಂದೂ ಪರಿಷದ್ ಮಂಗಳೂರು ವಿಭಾಗದ ಸಮಯೋಜಕ ಪುನೀತ್ ಅತ್ತಾವರ,
ವಿಶ್ವ ಹಿಂದೂ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ವಿಶ್ವ ಹಿಂದೂ ಪರಿಷದ್ ಬಜರಂಗದಳ ತಾಲೂಕು ಪ್ರಖಂಡದ ಅಧ್ಯಕ್ಷ ದಿನೇಶ್ ಚಾರ್ಮಾಡಿ, ತಾಲೂಕು ಸಂಯೋಜಕ ಸಂತೋಷ್ ಅತ್ತಾಜೆ,
ಗೋ ರಕ್ಷಕ ರಮೇಶ ಧರ್ಮಸ್ಥಳ ಉಪಸ್ಥಿತರಿದ್ದರು. ಬೆಳ್ತಂಗಡಿ ಪ್ರಖಂಡದ ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಅಖಿಲ್ ರೆಖ್ಯ ಸ್ವಾಗತಿಸಿದರು.