Tue. Jan 7th, 2025

Manipal: ಅಪಾಯಕಾರಿ ವ್ಹೀಲಿಂಗ್ ಮಾಡಿ ರೀಲ್ಸ್ ಮಾಡುತ್ತಿದ್ದ ಯುವಕ ಪೊಲೀಸರ ಅತಿಥಿ!

ಮಣಿಪಾಲ:(ಜ.6) ಸಹಸವಾರನನ್ನು ಅಪಾಯಕರ ರೀತಿಯಲ್ಲಿ ಕುಳ್ಳಿರಿಸಿಕೊಂಡು ರೀಲ್ಸ್ ಗಾಗಿ ವ್ಹೀಲಿಂಗ್ ಮಾಡುತ್ತಿದ್ದ ಸ್ಕೂಟರ್ ಸವಾರನನ್ನು ಪೊಲೀಸರು ಬಂಧಿಸಿದ್ದಾರೆ. ಮುಹಮ್ಮದ್ ಆಶಿಕ್‌ (19) ಬಂಧಿತ ಯುವಕ.

ಇದನ್ನೂ ಓದಿ: Mangalore: ಮಂಗಳೂರು ವಿಮಾನ ನಿಲ್ದಾಣದಲ್ಲಿ ದಿಢೀರ್‌ ಆಗಿ ಕಾಣಿಸಿಕೊಂಡ ನಟ ಯಶ್!!

ಆಶಿಕ್ ತನ್ನ ದ್ವಿಚಕ್ರ ವಾಹನದಲ್ಲಿ ಮಣಿಪಾಲ ಈಶ್ವರ ನಗರದಿಂದ ವಿದ್ಯಾರತ್ನ ನಗರದ ಕಡೆಗೆ ತೆರಳುವ ರಸ್ತೆಯಲ್ಲಿ ಅಪಾಯ ತರುವ ರೀತಿಯಲ್ಲಿ ವ್ಹೀಲಿಂಗ್ ನಡೆಸುತ್ತಿದ್ದ. ಈತ ವ್ಹೀಲಿಂಗ್ ಮಾಡುತ್ತಿದ್ದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರದಾಡಿತ್ತು.


ಅಲ್ಲದೆ, ಈತ ಹೆಲ್ಮೆಟ್ ಕೂಡ ಹಾಕಿರಲಿಲ್ಲ. ಆತನ ಬಗ್ಗೆ ಮಾಹಿತಿ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *