ಬೆಳ್ತಂಗಡಿ :(ಜ.7) ತಾಲೂಕಿನ ಸರಕಾರಿ ಕಾಲೇಜಿನಲ್ಲಿ ಸಭೆ ಸಮಾರಂಭಗಳಿಗೆ ಅಗತ್ಯತೆ ಇದ್ದ ಚೇರ್ ಗಳನ್ನು ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ತಾಲೂಕಿನ ಸರಕಾರಿ ಪದವಿಪೂರ್ವ ಕಾಲೇಜಿಗೆ ನೀಡಲಾಯಿತು.
ಸರಿಯಾಗಿ ಅನುದಾನ ಸಿಗದೇ ಕಳೆದ ಅನೇಕ ವರ್ಷಗಳಿಂದ ಚೇರ್ ಗಳ ಕೊರತೆ ಅನುಭವಿಸುತ್ತಿದ್ದ ಕಾಲೇಜಿನ ಆಡಳಿತ ಮಂಡಳಿ ಇಲಾಖೆಯ ಮುಂದೆ ಚೇರ್ ಮತ್ತು ಮೂಲಭೂತ ಸೌಕರ್ಯಗಳ ಬೇಡಿಕೆಯನ್ನು ಇರಿಸಿತ್ತು. ಚೇರ್ ಗಳು ಈವರೆಗೂ ಲಭಿಸಿದೆ ಇದ್ದುದರಿಂದ , ಬೆಳ್ತಂಗಡಿ ರೋಟರಿ ಕ್ಲಬ್ ಗೆ ಮನವಿ ನೀಡಿದ ಬೆನ್ನಲ್ಲಿ ರೋಟರಿ ಸಂಸ್ಥೆ ಸುಮಾರು 4 ಲಕ್ಷಕ್ಕೂ ಅಧಿಕ ಮೊತ್ತದ 670 ಚೇರ್ ಗಳ ವ್ಯವಸ್ಥೆಯನ್ನು ಮಾಡಿ, ಕಾಲೇಜಿಗೆ ದಾನವಾಗಿ ನೀಡಿ ಸಹಕರಿಸಿದೆ. ಕಾಲೇಜಿನ ಆಡಳಿತ ಮಂಡಳಿಗೆ ರೋಟರಿ ಜಿಲ್ಲಾ ಗವರ್ನರ್ ರೋ. ವಿಕ್ರಮ್ ದತ್ತ ಮತ್ತು ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮಾ, ಬೆಳ್ತಂಗಡಿ ತಾಲೂಕಿನ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರವರಿಗೆ ಚೇರ್ ಗಳನ್ನು ಹಸ್ತಾಂತರಿಸಿದರು.
ಈ ಒಂದು ಕೊಡುಗೆಯು ಕಾಲೇಜಿಗೆ ಅತ್ಯಂತ ಅಮೂಲ್ಯವಾದ ಕೊಡುಗೆಯಾಗಿದೆ. ವಿದ್ಯಾರ್ಥಿಗಳು ಯಾವುದೇ ಕಾರ್ಯಕ್ರಮದಲ್ಲಿ ಕುಳಿತುಕೊಳ್ಳಲು ಯಾವುದೇ ಆಸನ ವ್ಯವಸ್ಥೆ ಇರಲಿಲ್ಲ. ಇದೀಗ ಈ ಕೊಡುಗೆಯಿಂದಾಗಿ ಕಾಲೇಜಿನಲ್ಲಿ.ಇಲ್ಲಿಯವರೆಗೆ ಎಲ್ಲ ವಿದ್ಯಾರ್ಥಿಗಳನ್ನು ಸೇರಿಸಿ ಕಾರ್ಯಕ್ರಮ ಮಾಡುವುದು ಬಹಳ ತ್ರಾಸದಾಯಕವಾಗಿತ್ತು ಮಾತ್ರವಲ್ಲ ಹೆಚ್ಚು ವೆಚ್ಚದಾಯಕವೂ ಆಗಿತ್ತು. ಆದ್ದರಿಂದ ನಿಮ್ಮ ಕೊಡುಗೆಯು ವಿದ್ಯಾರ್ಥಿಗಳಿಗೆ ಅತ್ಯಂತ ಸುಲಭವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲು ಸಹಕಾರಿಯಾಗಿದೆ. ವಿದ್ಯಾರ್ಥಿಗಳು ತುಂಬಾ ಉತ್ಸಾಹದಿಂದ ಕಾರ್ಯಕ್ರಮ ಹಮ್ಮಿಕೊಳ್ಳುವ ಅವಕಾಶ ಪಡೆದಿದ್ದಾರೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಯನ್ನು ಅನಾವರಣ ಗೊಳಿಸಲು ಒಂದು ಅತ್ಯುತ್ತಮ ವೇದಿಕೆಯನ್ನು ಕಲ್ಪಿಸಿ ಕೊಟ್ಟಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಸುಕುಮಾರ್ ಜೈನ್ ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ರೋಟರಿ ಅಸಿಸ್ಟೆಂಟ್ ಗವರ್ನರ್ ರೋ. ಮೊಹಮ್ಮದ್ ವಳವೂರು, ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ಕುಮಾರ್ ರಾವ್, ರೋ. ಅನಂತ ಭಟ್, ರೋ. ವಿದ್ಯಾ ಕುಮಾರ್ ಕಾಂಚೋಡು, ರೋ. ಪ್ರಕಾಶ್ ಪ್ರಭು ಸೇರಿದಂತೆ ಕಾಲೇಜಿನ ಶಿಕ್ಷಕರ ವೃಂದ ಮತ್ತು ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಕಾರ್ಯಕ್ರಮವನ್ನು ರೋ. ಧನಂಜಯ್ ರಾವ್ ನಿರೂಪಿಸಿ, ವಂದಿಸಿದರು.