Wed. Jan 8th, 2025

Bengaluru: ಯುವತಿಗೆ ಮದ್ಯ ಕುಡಿಸಿ ಬಿಜೆಪಿ ಮುಖಂಡನಿಂದ ಅತ್ಯಾಚಾರ – ಎಫ್‌ಐಆರ್ ದಾಖಲು

ಬೆಂಗಳೂರು:(ಜ.7) ಮದುವೆಗೆ ಸಾಲ ಕೊಡುವುದಾಗಿ ಹೇಳಿ 26 ವರ್ಷದ ಯುವತಿಯನ್ನು ಪುಸಲಾಯಿಸಿ ಫ್ಲ್ಯಾಟ್‌ಗೆ ಕರೆದೊಯ್ದು ಮದ್ಯ ಕುಡಿಸಿ ಆಕೆಯ ಮೇಲೆ ಬಿಜೆಪಿ ಮುಖಂಡನೋರ್ವ ಅತ್ಯಾಚಾರವೆಸಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಇದನ್ನೂ ಓದಿ: ಮಂಗಳೂರು: ಕಾರಾಗೃಹದ ಆವರಣಕ್ಕೆ ಕೆಂಪು ಟೇಪ್‌ನಲ್ಲಿ ಸುತ್ತಿದ ಬಂಡಲ್‌ಗಳನ್ನು ಎಸೆಯಲು ಯತ್ನ

ಇದೀಗ ಯುವತಿ ನೀಡಿದ ದೂರಿನ ಆಧಾರದ ಮೇಲೆ ಬಿಜೆಪಿ ಮುಖಂಡ ಜಿಮ್ ಸೋಮ ಅಲಿಯಾಸ್ ಸೋಮಶೇಖರ್ ಮೇಲೆ ಅಶೋಕನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸಂತ್ರಸ್ತ ಯುವತಿಗೆ ಆಕೆಯ ಸ್ನೇಹಿತೆ ಮೂಲಕ ಸೋಮಶೇಖರ್ ಪರಿಚಯವಾಗಿತ್ತು. ಕಳೆದ ವರ್ಷ ಯುವತಿಗೆ ಮದುವೆ ಫಿಕ್ಸ್ ಆಗಿರುವ ಸಮಯದಲ್ಲಿ ಯುವತಿ ಮದುವೆಗಾಗಿ ಸೋಮಶೇಖರ್ ಬಳಿ ಸುಮಾರು 6 ಲಕ್ಷ ಹಣದ ಸಹಾಯ ಕೇಳಿದ್ದರು.


ಕಳೆದ ವರ್ಷ ಅಕ್ಟೋಬರ್‌ನಲ್ಲಿ ಹಣ ಕೊಡುವುದಾಗಿ ಸಂತ್ರಸ್ತೆಯನ್ನು ಪಿಜಿಯಿಂದ ಲ್ಯಾಂಗ್ ಫೋರ್ಡ್ ರಸ್ತೆಯ ತನ್ನ ಫ್ಲಾಟ್‌ಗೆ ಕರೆದೊಯ್ದು ಇಚ್ಚೆಗೆ ವಿರುದ್ಧವಾಗಿ ಮದ್ಯಕುಡಿಸಿ ಅತ್ಯಾಚಾರವೆಸಗಿದ್ದಾನೆ. ನಂತರ ಆಕೆಗೆ ಜೀವ ಬೆದರಿಕೆ ಹಾಕಿದ್ದು, ಮಾನ ಹರಾಜು ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೆ ದೂರು ನೀಡಿದ್ದಾಳೆ.

ಸದ್ಯ ಘಟನೆ ನಡೆದು ಮೂರು ತಿಂಗಳ ಬಳಿಕ ಸಂತ್ರಸ್ತೆ ಅಶೋಕನಗರ ಠಾಣೆಗೆ ದೂರು ನೀಡಿದ್ದಾಳೆ. ಸಕಲೇಶಪುರ ಕ್ಷೇತ್ರದಿಂದ ಶಾಸಕ ಸ್ಥಾನಕ್ಕೆ ಸ್ಫರ್ಧಿಸಿ ಪರಾಜಯಗೊಂಡಿದ್ದ ಸೋಮಶೇಖರ್ ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *