Chahal and Dhanashree:(ಜ.7) ಟೀಂ ಇಂಡಿಯಾದಲ್ಲಿ ಅವಕಾಶಗಳು ಸಿಗದೆ ಬಹಳ ದಿನಗಳಿಂದ ತಂಡದಿಂದ ಹೊರಗುಳಿದಿರುವ ಸ್ಟಾರ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಅವರ ವೈಯಕ್ತಿಕ ಜೀವನದಲ್ಲಿ ಬಿರುಗಾಳಿ ಎದ್ದಿದೆ. ಚಹಾಲ್ ಹಾಗೂ ಅವರ ಪತ್ನಿ ಧನಶ್ರೀ ವರ್ಮಾ ಅವರೊಂದಿಗಿನ ಸಂಬಂಧದಲ್ಲಿ ಭಿನ್ನಾಭಿಪ್ರಾಯ ಮೂಡಿದೆ ಎಂಬ ಸುದ್ದಿ ಇಡೀ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯ ಕೇಂದ್ರ ಬಿಂದುವಾಗಿದೆ.
ಇದನ್ನೂ ಓದಿ: ಕುತ್ಯಾರು: ಕುತ್ಯಾರು ಸೂರ್ಯ ಚೈತನ್ಯ ಸಂಸ್ಥೆಯ ವಾರ್ಷಿಕೋತ್ಸವ
ಇದಕ್ಕೆ ಪೂರಕವಾಗಿ ಇವರಿಬ್ಬರು ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪರಸ್ಪರ ಅನ್ಫಾಲೋ ಮಾಡಿದ್ದಾರೆ. ಇದಲ್ಲದೆ ಒಂದು ಹೆಜ್ಜೆ ಮುಂದಿಟ್ಟಿರುವ ಚಹಾಲ್, ಧನಶ್ರೀ ಅವರೊಂದಿಗಿನ ಎಲ್ಲಾ ಫೋಟೋ ಹಾಗೂ ವಿಡಿಯೋಗಳನ್ನು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಿಂದ ಡಿಲೀಟ್ ಮಾಡಿದ್ದಾರೆ. ಹೀಗಾಗಿ ಈ ಇಬ್ಬರು ವಿಚ್ಛೇದನ ಪಡೆಯುವುದು ಖಚಿತ ಎಂದು ಹೇಳಲಾಗುತ್ತಿದೆ. ಯುಜ್ವೇಂದ್ರ ಚಹಾಲ್ ಬೇರೊಬ್ಬ ಹುಡುಗಿಯೊಂದಿಗೆ ಓಡಾಟ ನಡೆಸುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದೆ.
ಬೇರೊಬ್ಬ ಯುವತಿ ಜೊತೆ ಚಹಾಲ್ ಸುತ್ತಾಟ
ಅಷ್ಟಕ್ಕೂ ಧನಶ್ರೀ ವರ್ಮಾ ಹಾಗೂ ಯುಜ್ವೇಂದ್ರ ಚಹಾಲ್ ವಿಚ್ಛೇದನ ಪಡೆಯುತ್ತಿದ್ದಾರಾ ಎಂಬುದರ ಬಗ್ಗೆ ಇದುವರೆಗೆ ಈ ಇಬ್ಬರು ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಆದರೆ ಅವರ ಆಪ್ತ ಮೂಲಗಳು ನೀಡಿರುವ ಮಾಹಿತಿ ಪ್ರಕಾರ, ಈ ಇಬ್ಬರು ಪರಸ್ಪರ ಬೇರೆ ಬೇರೆಯಾಗಿ ಜೀವನ ನಡೆಸಲು ತೀರ್ಮಾನಿಸಿದ್ದು, ಇಷ್ಟರಲ್ಲೇ ವಿಚ್ಛೇದನ ಪಡೆಯುವ ಸಾಧ್ಯತೆ ಇದೆ. ಇದೀಗ ಈ ವಿಚ್ಛೇದನ ವದಂತಿಯ ನಡುವೆ ಚಹಲ್ ಮತ್ತೊಬ್ಬ ಹುಡುಗಿಯ ಜೊತೆ ಓಡಾಟ ನಡೆಸುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಮುಖ ಮರೆಮಾಚಿದ ಚಹಾಲ್
ಸದ್ಯಕ್ಕೆ ಚಹಾಲ್ ಜೊತೆಗೆ ಕಾಣಿಸಿಕೊಂಡಿರುವ ಆ ಯುವತಿ ಯಾರೆಂಬುದು ತಿಳಿದುಬಂದಿಲ್ಲ. ಆದರೆ ಈ ಇಬ್ಬರು ಜೊತೆಯಾಲ್ಲಿ ಕಾರಿನಲ್ಲಿ ಕಾಣಿಸಿಕೊಂಡಿದ್ದಾರೆ. ಈ ವೇಳೆ ಮಾಧ್ಯಮದ ಕ್ಯಾಮರಾಗಳು ಚಹಾಲ್ ಅವರನ್ನು ಸೆರೆಹಿಡಿಯಲು ಪ್ರಯತ್ನಿಸಿದಾಗ ಅವರು ತನ್ನ ಮುಖವನ್ನು ಮರೆಮಾಚಿದ್ದಾರೆ. ಅಂದಿನಿಂದ ಧನಶ್ರೀ ಮತ್ತು ಚಹಾಲ್ ವಿಚ್ಛೇದನದ ಸುದ್ದಿಗೆ ಈ ನಿಗೂಢ ಹುಡುಗಿಯೇ ಕಾರಣ ಎಂಬ ಚರ್ಚೆಗಳು ನಡೆಯುತ್ತಿವೆ.