ಧರ್ಮಸ್ಥಳ:(ಜ.7) ಧರ್ಮಸ್ಥಳದಲ್ಲಿ ಭಕ್ತಾದಿಗಳಿಗೆ ದೇವರದರ್ಶನಕ್ಕಾಗಿ ಆರಾಮದಾಯಕ ಸರತಿಸಾಲಿನ ನೂತನ ಸಂಕೀರ್ಣ “ಶ್ರೀ ಸಾನ್ನಿಧ್ಯ” ನಿರ್ಮಾಣಗೊಂಡಿದ್ದು ಜ.7 ರಂದು ಭಾರತದ ಉಪರಾಷ್ಟ್ರಪತಿಯಾದ ಜಗದೀಪ್ ಧನ್‌ಕರ್ ರವರು ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಡಾ.ಸುದೇಶ್ ಧನ್ ಕರ್, ಹೇಮಾವತಿ ವೀ.ಹೆಗ್ಗಡೆ, ದ.ಕ. ಲೋಕಸಭಾ ಸದಸ್ಯರಾದ ಕ್ಯಾ.ಬ್ರಿಜೇಶ್ ಚೌಟ, ಡಿ. ಹರ್ಷೇಂದ್ರ ಕುಮಾರ್, ಸುರೇಂದ್ರ ಕುಮಾರ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಸಕ್ತ ವರ್ಷದ ಜ್ಞಾನದೀಪ ಕಾರ್ಯಕ್ರಮಕ್ಕೂ ಚಾಲನೆ ನೀಡಿದರು.