ಸುಳ್ಯ:(ಜ.9) ತಾಯಿಯೊಬ್ಬಳು ತನ್ನದೇ ಐದು ವರ್ಷದ ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟು ಗಾಯಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಆರೋಪ ಸಾಬೀತಾಗಿದ್ದು, ಆರೋಪಿಗೆ ಶಿಕ್ಷೆ ಪ್ರಕಟವಾಗಿದೆ.
ಇದನ್ನೂ ಓದಿ: ಉಜಿರೆ: ಉಜಿರೆ ಬೆನಕ ಆಸ್ಪತ್ರೆಯಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ
2022 ರ ಆ.16 ರಂದು ಸುಳ್ಯ ಗಾಂಧಿನಗರ ನಾವೂರು ಎಂಬಲ್ಲಿ ತಾಯಿಯೋರ್ವಳು ಬಿಸಿ ಹಾಲಿನ ಪಾತ್ರೆಯಿಂದ ತನ್ನ ಐದು ವರ್ಷ ಪ್ರಾಯದ ಪುತ್ರಿಯ ದೇಹದ ವಿವಿಧ ಕಡೆ ಸುಟ್ಟಿದ್ದಳು. ಈ ಕುರಿತು ತಾಯಿಯಾದ ಕಾವ್ಯಶ್ರೀ ಅವರ ವಿರುದ್ಧ ಮಹಿಳಾ ಮತ್ತು ಮಕ್ಕಳ ಸಂರಕ್ಷಣಾಧಿಕಾರಿ ರಶ್ಮಿ ಅವರು ಸುಳ್ಯ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು.
ಈ ವಿಚಾರಣೆ ಸುಳ್ಯ ನ್ಯಾಯಾಲಯದಲ್ಲಿ ನಡೆದಿದ್ದು, ಹಿರಿಯ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಬಿ.ಮೋಹನ್ ಬಾಬು ಅವರು ಆಪಾದಿತೆಯನ್ನು ದೋಷಿಯೆಂದು ಘೋಷಿಸಿ, ಒಟ್ಟು 10 ಸಾವಿರ ರೂ. ದಂಡ, ಕೊಡಲು ತಪ್ಪಿದ್ದಲ್ಲಿ ಎರಡು ತಿಂಗಳ ಸಾದಾ ಕಾರಾಗೃಹ ವಾಸದ ತೀರ್ಪನ್ನು ನೀಡಿದೆ.