Thu. Jan 9th, 2025

Sullia: ಬೆಳ್ಳಾರೆಯ ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ – ಆರೋಪಿಗಳಿಗೆ ಜಾಮೀನು ತಿರಸ್ಕರಿಸಿದ ಸುಪ್ರೀಂ..!!

ಸುಳ್ಯ:(ಜ.9) ಬೆಳ್ಳಾರೆಯ ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು.

ಇದನ್ನೂ ಓದಿ: ಬಂದಾರು : ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ ಶುಭಸಂದರ್ಭದಲ್ಲಿ

ಬಿಜೆಪಿ ಯುವ ಮೋರ್ಚಾ ಮುಖಂಡನನ್ನು ಹತ್ಯೆ ಮಾಡಿದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ಆಗಲೇಬೇಕು ಎಂದು ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದವು. ಇದೀಗ ಈ ಪ್ರಕರಣ ಹೊಸದೊಂದು ತಿರುವನ್ನು ಪಡೆದುಕೊಂಡಿದೆ.

ಆರೋಪಿಗಳಿಗೆ ಜಾಮೀನು ತಿರಸ್ಕರಿಸಿದ ಸುಪ್ರೀಂ..!

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ 21ನೇ ಆರೋಪಿಯಾಗಿರುವ ಮೊಹಮ್ಮದ್ ಜಾಬೀರ್ ಎಂಬಾತನಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ‌. ಪುತ್ತೂರಿನ ಒಳಮೊಗ್ರು ಗ್ರಾಮದ ನಿವಾಸಿ ಮೂವತ್ತೆರಡು ವರ್ಷದ ಜಾಬೀರ್ ಜಾಮೀನು ತಿರಸ್ಕೃತಗೊಂಡ ಆರೋಪಿಯಾಗಿದ್ದಾನೆ.

ಈತನ ಹಿನ್ನೆಲೆ ಎಂದರೆ ನಿಷೇಧಿತ ಪಿಎಫ್ಐ ಸಂಘಟನೆ ಹಾಗೂ ಎಸ್ಡಿಪಿಐ ಪಕ್ಷದ ಮುಖಂಡನಾಗಿದ್ದ. ಎನ್ಐಎ ನ್ಯಾಯಾಲಯ 2023 ರ ಫೆಬ್ರವರಿ 9ರಂದು ಈತನ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು