ಉಡುಪಿ:(ಜ.9) ಬೈರಂಪಳ್ಳಿ ಗ್ರಾಮದ ದೂಪದಕಟ್ಟೆ ಚೌಡೇಶ್ವರಿ ದೇವಸ್ಥಾನದ ಬಳಿ ಮರಕ್ಕೆ ಬೈಕ್ ಡಿಕ್ಕಿಯಾಗಿ ಯುವಕ ಸಾವನ್ನಪ್ಪಿದ ಘಟನೆ ನಡೆದಿದೆ.
ಇದನ್ನೂ ಓದಿ: Mangaluru : ರಿವಲ್ವಾರ್ ಪರಿಶೀಲನೆ ವೇಳೆ ಗುಂಡು ತಗುಲಿ ಗಾಯಗೊಂಡ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಮೃತ ಯುವಕ ಸಂತೋಷ್(28ವ)
ಸಂತೋಷ್ ಬೈಕ್ ನಲ್ಲಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ಹೊಡೆದ ಪರಿಣಾಮ ಸಂತೋಷ್ ಅವರು ಗಂಭೀರವಾಗಿ ಗಾಯಗೊಂಡಿದ್ದು,
ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಹಿರಿಯಡ್ಕ ಪೋಲಿಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.