ಬೆಳ್ತಂಗಡಿ: (ಜ.10) ಕೊಲೆ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವೇಣೂರು ಪೋಲಿಸ್ ಠಾಣೆಯ ಪೋಲಿಸರು ಬಂಧಿಸಿದ್ದಾರೆ.
ಇದನ್ನೂ ಓದಿ: ಮುಲ್ಕಿ: ಬೈಕ್ ಗೆ ಬಸ್ ಡಿಕ್ಕಿ
ವೇಣೂರು ಪೋಲಿಸ್ ಠಾಣೆಯಲ್ಲಿ 2024 ರಲ್ಲಿ ದಾಖಲಾಗಿದ್ದ ಕಲಂ:109 BNS -2023(ಕೊಲೆ ಯತ್ನ) ಪ್ರಕರಣದಲ್ಲಿ ಮೂಡಬಿದ್ರೆ ತಾಲೂಕಿನ
ಪುತ್ತಿಗೆ ಗ್ರಾಮದ ನಿವಾಸಿ ಮಹಮ್ಮದ್ ಇಕ್ಬಾಲ್ (27) ನನ್ನು ಜ.9 ರಂದು ವೇಣೂರು ಪೋಲಿಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಶ್ರೀ ಶೈಲ ಮತ್ತು ಸಬ್ ಇನ್ಸ್ಪೆಕ್ಟರ್ ಆನಂದ ನೇತೃತ್ವದ
ಪೋಲಿಸರ ತಂಡ ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ 15 ದಿನದ ನ್ಯಾಯಾಂಗ ಬಂಧನ ವಿಧಿಸಲಾಗಿದೆ.