Fri. Jan 10th, 2025

Bengaluru: ಬಿಪಿಎಲ್​ ಕಾರ್ಡ್ ದಾರದರಿಗೆ ​ಬಿಗ್‌ ಶಾಕ್‌ ನೀಡಿದ ಸಿಎಂ ಸಿದ್ದರಾಮಯ್ಯ!? – ಏನದು?!

ಬೆಂಗಳೂರು:(ಜ.10) ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಅನರ್ಹರನ್ನು ಗುರುತಿಸಿ ಅವರನ್ನು ಪಟ್ಟಿಯಿಂದ ಹಂತ ಹಂತವಾಗಿ ತೆಗೆದುಹಾಕಬೇಕು. ಆದರೆ, ಒಬ್ಬನೇ ಒಬ್ಬ ಅರ್ಹನ ಬಿಪಿಎಲ್ ಕಾರ್ಡ್ ರದ್ದು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸೂಚನೆ ನೀಡಿದ್ದಾರೆ. ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿದ ಅವರು ಅಧಿಕಾರಿಗಳು ಹಲವು ಆದೇಶಗಳನ್ನು ನೀಡಿದ್ದಾರೆ.

ಇದನ್ನೂ ಓದಿ: ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕ್ರೀಡೋತ್ಸವ ಸ್ಪರ್ಧೆಯಲ್ಲಿ ಬಹುಮಾನ

ಅನರ್ಹ ಬಿಪಿಎಲ್ ಕಾರ್ಡುದಾರರು ಸ್ವಯಂ ಪ್ರೇರಿತವಾಗಿ ತಮ್ಮ ಕಾರ್ಡ್‍ಗಳನ್ನು ಹಿಂತಿರುಗಿಸಲು ಕಾಲಾವಕಾಶ ನೀಡಬೇಕು. ಅದಾದ ನಂತರ ಅಂಥವರಿಗೆ ನೊಟೀಸ್ ನೀಡಿ ಬಿಪಿಎಲ್ ಕಾರ್ಡುಗಳನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಈಗಾಗಲೇ 4 ಸಾವಿರ ಸರಕಾರಿ ನೌಕರರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಯಡಿ 4692 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಅಕ್ಟೋಬರ್ ಅಂತ್ಯದವರೆಗೆ 3253 ಕೋಟಿ ರೂ. ವೆಚ್ಚ ಮಾಡಲಾಗಿದೆ. 4,44,48,294 ಫಲಾನುಭವಿಗಳು ಇದರ ಲಾಭ ಪಡೆಯುತ್ತಿದ್ದಾರೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಇಂದಿನ ಸಭೆಯಲ್ಲಿ ಮಾಹಿತಿ ನೀಡಿದರು. ಹಾಗೇ, ರಾಜ್ಯದಲ್ಲಿ ಒಟ್ಟು 4518 ಪೆಟ್ರೋಲ್ ಬಂಕ್‍ಗಳಿದ್ದು, ಡಿಸೆಂಬರ್ ಅಂತ್ಯದವರೆಗೆ 503 ಪೆಟ್ರೋಲ್ ಬಂಕ್‍ಗಳ ತಪಾಸಣೆ ಮಾಡಲಾಗಿದೆ ಎಂದು ಮುನಿಯಪ್ಪ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಪಡಿತರ ಹಾಗೂ ಆಹಾರ ಧಾನ್ಯ ವಿತರಣಾ ವ್ಯವಸ್ಥೆಯನ್ನು ತಳಹಂತದಲ್ಲಿ ಬಲಪಡಿಸುವ ಮೂಲಕ ಜಾಗೃತಿ ಸಮಿತಿಗಳಲ್ಲಿ ಜನರ ಸಹಭಾಗಿತ್ವವನ್ನು ಹೆಚ್ಚಿಸಬೇಕು. ಸಮಿತಿ ನಿಯಮಿತವಾಗಿ ಸಭೆ ನಡೆಸಬೇಕು. ಪೆಟ್ರೋಲ್ ಬಂಕ್‍ಗಳ ತಪಾಸಣೆಯನ್ನು ಹೆಚ್ಚಿಸಿ ಅಳತೆ ಮತ್ತು ಗುಣಮಟ್ಟದಲ್ಲಿ ಮೋಸದಂತಹ ಅಕ್ರಮಗಳಿಗೆ ಸಂಪೂರ್ಣ ಕಡಿವಾಣ ಹಾಕಬೇಕು ಎಂದು ಹೇಳಿದರು.

ಕನಿಷ್ಠ ಬೆಂಬಲ ಬೆಲೆ ಅಡಿ ಆಹಾರ ಧಾನ್ಯ ಸಂಗ್ರಹಿಸಲು ಎಲ್ಲ ವ್ಯವಸ್ಥೆ ಮಾಡಬೇಕು. ರೈತರಿಗೆ ಸಮಸ್ಯೆಯಾಗದಂತೆ ತ್ವರಿತವಾಗಿ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಹೇಳಿದರು.

ಹಾಗೇ, ಕರ್ನಾಟಕದಲ್ಲಿ 1,53,69,945 ಪಡಿತರ ಚೀಟಿಗಳಿದ್ದು, 5,30,88,636 ಸದಸ್ಯರು ಫಲಾನುಭವಿಗಳಾಗಿದ್ದಾರೆ. ಇಲಾಖೆಯಲ್ಲಿ ಒಟ್ಟು 709 ಹುದ್ದೆಗಳು ಖಾಲಿಯಿವೆ. ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆಯಡಿ ಕರ್ನಾಟಕದಲ್ಲಿ ಬೇರೆ ರಾಜ್ಯಗಳ 13,383 ಫಲಾನುಭವಿಗಳು ಪಡಿತರ ಸೌಲಭ್ಯ ಪಡೆಯುತ್ತಿದ್ದಾರೆ.

ಕುಟುಂಬದಲ್ಲಿ ಒಬ್ಬರೇ ಇರುವ, 80 ವರ್ಷ ದಾಟಿದವರಿಗೆ ಮನೆ ಬಾಗಿಲಿಗೆ ಆಹಾರ ಧಾನ್ಯ ಒದಗಿಸುವ ಅನ್ನ-ಸುವಿಧಾ ಯೋಜನೆಯನ್ನು ಜಾರಿಗೊಳಿಸಲಾಗಿದೆ. 8,500 ಪಡಿತರ ಚೀಟಿದಾರರು ಯೋಜನೆಯಡಿ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಮುನಿಯಪ್ಪ ಹೇಳಿದರು.

Leave a Reply

Your email address will not be published. Required fields are marked *