ಉಜಿರೆ:(ಜ.10) ಭಾರತ್ ಸ್ಕೌಟ್ ಮತ್ತು ಗೈಡ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ) ಮೂಡುಬಿದಿರೆ ಇವರ ಸಹಭಾಗಿತ್ವದಲ್ಲಿ ಮೂಡುಬಿದಿರೆ ಸ್ವರಾಜ್ಯ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ
‘ಕ್ರೀಡೋತ್ಸವ’ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ 800ಮೀಟರ್ ಓಟ 8ನೇ ತರಗತಿ ವಿದ್ಯಾರ್ಥಿನಿ ನಿಶಾ ತೃತೀಯ, ಗುಂಡೆಸೆತ 4ನೇ ತರಗತಿ ಯುಕ್ತ ದ್ವಿತೀಯ ಹಾಗೂ 100 ಮೀಟರ್ ಓಟದಲ್ಲಿ 4ನೇ ತರಗತಿ ಸಾಕ್ಯಶ್ರೀ ತೃತೀಯ ಸ್ಥಾನವನ್ನು ಪಡೆದು ವಿಜೇತರಾಗಿರುತ್ತಾರೆ.
ಭಾಗವಹಿಸಿದ ಹಾಗೂ ವಿಜೇತರಾದ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಶ್ರೀ ಮನ್ಮೋಹನ್ ನಾಯ್ಕ್ ಕೆ.ಜಿ ಹಾಗೂ ಶಿಕ್ಷಕ ವೃಂದ ಅಭಿನಂದಿಸಿ ಶುಭಹಾರೈಸಿದರು.