Sat. Jan 11th, 2025

Tumkuru: ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್‌ ಪುತ್ರ ಆತ್ಮಹತ್ಯೆಗೆ ಶರಣು – ಡೆತ್‌ ನೋಟ್‌ ನಲ್ಲಿತ್ತು ಸ್ಫೋಟಕ ಸತ್ಯ!!

ತುಮಕೂರು:(ಜ.11) 7 ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ತುಮಕೂರು ನಗರದ ವಿಜಯನಗರ 2ನೇ ಮುಖ್ಯರಸ್ತೆಯಲ್ಲಿ ನಡೆದಿದೆ.

ಇದನ್ನೂ ಓದಿ: ಬೆಳ್ತಂಗಡಿ: ಸ್ವ ಉದ್ಯೋಗ ಆಧಾರಿತ ತರಬೇತಿಯ ಸಮಾರೋಪ ಕಾರ್ಯಕ್ರಮ

ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್‌ ಅವರ ಪುತ್ರ ತ್ರಿಶಾಲ್‌ ಎಂಬಾತನೇ ಮೃತ ಹೊಂದಿದ್ದು, ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್‌ ಬರೆದಿಟ್ಟಿದ್ದಾನೆ.

ಪಾರಿವಾಳದ ಬೆಟ್ಟಿಂಗ್‌ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆಯಾಗಿದ್ದು, ಈ ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ವರದಿಯಾಗಿದೆ.

ಸ್ಥಳಕ್ಕೆ ಜಯನಗರ ಪೊಲೀಸರು ಭೇಟಿ ನೀಡಿದ್ದು, ಈ ಘಟನೆ ಕುರಿತು ಜಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *