Sat. Jan 11th, 2025

Udupi: ಬೈಕ್ ಗೆ ಟ್ರಕ್ ಡಿಕ್ಕಿ – ಬೈಕ್‌ ಸವಾರ ಸ್ಥಳದಲ್ಲೇ ಸಾವು!! – ಟ್ರಕ್ ಸಂಪೂರ್ಣ ಬೆಂಕಿಗಾಹುತಿ!!

ಉಡುಪಿ:(ಜ.11) ಬೈಕ್ ಗೆ ಟ್ರಕ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟು, ಟ್ರಕ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಶುಕ್ರವಾರ ಮದ್ಯರಾತ್ರಿ ರಾ.ಹೆ‌. 66 ರ ಉದ್ಯಾವರ ಕೊರಂಗ್ರಪಾಡಿ ಬಳಿ ನಡೆದಿದೆ.

ಇದನ್ನೂ ಓದಿ: Puttur: ನೇಣು ಬಿಗಿದುಕೊಂಡು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್

ಬೆಳ್ತಂಗಡಿ: ಪಟ್ರಮೆಯ ಹಿಂದು ಯುವಕನೊಂದಿಗೆ ಮದುವೆಯಾದ ಮೂಡಬಿದ್ರೆಯ ಮುಸ್ಲಿಂ ಯುವತಿ!!

ಕೊರಂಗ್ರಪಾಡಿಯಿಂದ ಉದ್ಯಾವರ ಮೂಲಕವಾಗಿ ಪಣಿಯೂರಿಗೆ ಮರಳುತ್ತಿದ್ದ ಬೈಕ್ ಸವಾರ ಪಣಿಯೂರು ನಿವಾಸಿ ಅವಿನಾಶ್ ಆಚಾರ್ಯ (19) ಮೃತ ಯುವಕ.

ಉಡುಪಿಯಲ್ಲಿ ಪ್ಯಾರಾ ಮೆಡಿಕಲ್ ಕಲಿಯುತ್ತಿದ್ದ ಯುವಕ ರಾತ್ರಿ ಪರಿಚಯಸ್ಥರ ಮನೆಯ ಕಾರ್ಯಕ್ರಮಕ್ಕೆ ತೆರಳಿ, ಅಲ್ಲಿಂದ ವಾಪಸ್ಸಾಗುತ್ತಿದ್ದಾಗ ಈ ಘಟನೆ‌ ಸಂಭವಿಸಿದೆ.

ಟ್ರಕ್ ಢಿಕ್ಕಿ ಹೊಡೆದ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರ ಏಟಾಗಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಘಟನೆಯ ಮರುಕ್ಷಣ ಟ್ರಕ್ ನಲ್ಲೂ ಬೆಂಕಿ ಕಾಣಿಸಿಕೊಂಡಿದ್ದು ಟಗರಕ್ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಮದ್ಯ ರಾತ್ರಿ ಘಟನೆ ಸಂಭವಿಸಿದ ಕಾರಣ ತುರ್ತು ಪರಿಹಾರ ಕಾರ್ಯಾಚರಣೆ ನಡೆಸಲು ಸಾಧ್ಯವಾಗದೇ ಬೆಂಕಿಗೆ ಆಹುತಿಯಾಗುವಂತಾಗಿದೆ.

ಉಡುಪಿ ಅಗ್ನಿಶಾಮಕ ಸಿಬ್ಬಂದಿಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ

ಕಾಪು‌ ಪೊಲೀಸರು ಸ್ಥಳಕ್ಕೆ ಭೇಟಿ ‌ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *