Sun. Jan 12th, 2025

Bengaluru: ಬರ್ತ್ ಡೇ ದಿನವೇ ಮಸಣ ಸೇರಿದ ಬಾಲಕ – ಅಷ್ಟಕ್ಕೂ ಆಗಿದ್ದೇನು?

ಬೆಂಗಳೂರು (ಜ.12): ಬರ್ತ್ ಡೇ ದಿನವೇ ಬಾಲಕನೋರ್ವ ಮಸಣ ಸೇರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಇದನ್ನೂ ಓದಿ: ಉಜಿರೆ: ಉಜಿರೆಯಲ್ಲಿ ಎನ್‌ ಎಸ್‌ ಎಸ್ ವತಿಯಿಂದ ರಾಷ್ಟ್ರೀಯ ಯುವದಿನ ಸಂಪನ್ನ

ಬೆಂಗಳೂರಿನ ಹೆಣ್ಣೂರು ಬಂಡೆ ಮುಖ್ಯರಸ್ತೆಯಲ್ಲಿ ಕಳೆದ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಬಾಲಕನೋರ್ವ ಮೃತಪಟ್ಟಿದ್ದಾನೆ. ಭಾನು ತೇಜ (12) ಮೃತ ಬಾಲಕ.

ಆಂಧ್ರ ಪ್ರದೇಶದ ಚಿತ್ತೂರು ಮೂಲದವರಾದ ರವಿ ಹಾಗೂ ಸುಮಾ ದಂಪತಿ ಪುತ್ರ ಭಾನು ತೇಜ ಆರ್.ಟಿ.ನಗರ ಸತ್ಯಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವೇದ ಕಲಿಯಲು ಗುರುಗಳ ಜೊತೆಗೆ ವಾಸವಾಗಿದ್ದನು.

ಶನಿವಾರ ಭಾನು ತೇಜನ ಹುಟ್ಟುಹಬ್ಬವಿತ್ತು. ಹುಟ್ಟು ಹಬ್ಬ ಆಚರಣೆಗಾಗಿ ಹೊರಮಾವುನಲ್ಲಿರುವ ತನ್ನ ಅಕ್ಕನ ಮನೆಗೆ ಹೊಗಿದ್ದನು. ಹುಟ್ಟು ಹಬ್ಬ ಆಚರಣೆ ಬಳಿಕ ರಾತ್ರಿ 11.20ರ ಸುಮಾರಿಗೆ ಅಣ್ಣ ಚಕ್ರಧರಣ್ ಜೊತೆಗೆ ಬೈಕ್​ನಲ್ಲಿ ವಾಪಸ್​ ಆರ್​ಟಿ ನಗರದತ್ತ ತೆರಳುತ್ತಿದ್ದನು.

ಹೆಣ್ಣೂರು ಬಂಡೆ ಮುಖ್ಯರಸ್ತೆಯಲ್ಲಿ ಐಷರ್ ಟ್ರಕ್​ವೊಂದು ಹಿಂಬದಿಯಿಂದ ಭಾನು ತೇಜ್​ ಇದ್ದ ಬೈಕ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಭಾನು ತೇಜ್​ ಕೆಳಗೆ ಬಿದ್ದಿದ್ದಾನೆ. ಈ ವೇಳೆ ಬಾಲಕ ತಲೆಯ ಮೇಲೆ ಟ್ರಕ್​ನ ಎರಡು ಚಕ್ರಗಳು ಹರಿದಿವೆ.​

ಭಾನು ತೇಜ್​ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಚಕ್ರಧರಣ್​ಗೆ ಸಣ್ಣ-ಪುಟ್ಟ ಗಾಯಗಳಾವಿವೆ. ಟ್ರಕ್ ಚಾಲಕ ಪರಾರಿಯಾಗಿದ್ದು, ಹೆಣ್ಣೂರು ಟ್ರಾಫಿಕ್ ಠಾಣೆ ಪೊಲೀಸರು ಹುಡುಕಾಟ ಮುಂದುವರೆಸಿದ್ದಾರೆ. ಹೆಣ್ಣೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *