Sun. Jan 12th, 2025

Kasaragod: ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗು ಮೃತ್ಯು!!

ಕಾಸರಗೋಡು:(ಜ.12) ಗಲ್ಫ್ ನಿಂದ ಅಪ್ಪ ತಂದ ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಕುಂಬಳೆ ಯಲ್ಲಿ ನಡೆದಿದೆ.

ಇದನ್ನೂ ಓದಿ: ಬೆಳ್ತಂಗಡಿ ತಾಲೂಕು ಯುವಜನ ಒಕ್ಕೂಟದ ನೂತನ ಅಧ್ಯಕ್ಷರು, ಪದಾಧಿಕಾರಿಗಳ ಆಯ್ಕೆ


ಕುಂಬಳೆ ಭಾಸ್ಕರ ನಗರದ ಅನ್ವರ್ ಮಹರೂಫಾ ದಂಪತಿ ಪುತ್ರ ಅನಾಸ್ ಮೃತಪಟ್ಟ ಮಗು. ಅನಾಸ್ ಪಿಸ್ತಾವನ್ನು ತಿನ್ನುತ್ತಿದ್ದಾಗ ಸಿಪ್ಪೆ ಗಂಟಲಲ್ಲಿ ಸಿಲುಕಿದ್ದು, ಮನೆಯವರು ಸಿಪ್ಪೆಯ ಒಂದು ತುಂಡನ್ನು ಹೊರ ತೆಗೆದಿದ್ದಾರೆ.

ಬಳಿಕ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರು. ವೈದ್ಯರು ತಪಾಸಣೆ ನಡೆಸಿದಾಗ ಗಂಟಲಲ್ಲಿ ಯಾವುದೇ ವಸ್ತುಗಳು ಸಿಲುಕಿಲ್ಲ ಎಂದು ತಿಳಿಸಿದ್ದರಿಂದ ಮನೆಗೆ ಕರೆದುಕೊಂಡು ಪೋಷಕರು ಬಂದರು.


ಆದಿತ್ಯವಾರ ಬೆಳಿಗ್ಗೆ ಬಾಲಕನಿಗೆ ಉಸಿರಾಟದ ತೊಂದರೆ ಉಂಟಾಗಿದ್ದು, ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲಾಗಲಿಲ್ಲ ಎಂದು ತಿಳಿದು ಬಂದಿದೆ.

ಊರಿಗೆ ಬಂದಿದ್ದ ತಂದೆ ಅನ್ವರ್ ಒಂದು ವಾರದ ಹಿಂದೆಯಷ್ಟೇ ಗಲ್ಫ್ ಗೆ ತೆರಳಿದ್ದರು. ಸುದ್ದಿ ತಿಳಿದು ತಂದೆ ಊರಿಗೆ ಮರಳಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *