ಬೆಳಾಲು:(ಜ.13) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ , ಕರ್ನಾಟಕ ಸರ್ಕಾರ ಇದರ ವತಿಯಿಂದ ಉಡುಪಿ ಜಿಲ್ಲೆಯ ಬ್ರಹ್ಮಾವರದ ಹೆಗ್ಗುಂಜೆ ರಾಜೀವ ಶೆಟ್ಟಿ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ಪ್ರಾಥಮಿಕ ಮತ್ತು
ಇದನ್ನೂ ಓದಿ: ಬೆಳ್ತಂಗಡಿ: ಹಸುಗಳ ಕೆಚ್ಚಲು ಕೊಯ್ದ ಜಿಹಾದಿಗಳನ್ನು ಕೂಡಲೇ ಬಂಧಿಸಿ ! – ಹಿಂದೂ ಜನಜಾಗೃತಿ ಸಮಿತಿ
ಪ್ರೌಢಶಾಲಾ ವಿಶೇಷ ಚೇತನ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಬಾಲಕಿಯರ ಗುಂಡೆಸೆತ ಮತ್ತು ಈಟಿ ಎಸೆತ ಸ್ಪರ್ಧೆಯಲ್ಲಿ ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಯ ವಿದ್ಯಾರ್ಥಿನಿ ಜಾಹ್ನವಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ ,ಗುಂಡೆಸೆತ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಈಟಿ ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.
ವಿದ್ಯಾರ್ಥಿನಿ ಜಾಹ್ನವಿ ಶಾಲಾ ವತಿಯಿಂದ ಸನ್ಮಾನಿಸಲಾಯಿತು. ಜಾಹ್ನವಿಗೆ ಶಾಲಾ ದೈಹಿಕ ಶಿಕ್ಷಕರಾದ ಕೃಷ್ಣಾನಂದ ರವರು ತರಬೇತಿಯನ್ನು ನೀಡಿರುತ್ತಾರೆ.