Mon. Jan 13th, 2025

Mangaluru: ಸಿಗರೇಟ್‌ ಸೇದುವ ಲೈಟರ್‌ ವಿಚಾರಕ್ಕೆ ಎರಡು ತಂಡಗಳ ನಡುವೆ ಮಾರಾಮಾರಿ – ನಾಲ್ವರು ಆರೋಪಿಗಳು ಅರೆಸ್ಟ್!!

ಮಂಗಳೂರು:(ಜ.13) ಸಿಗರೇಟ್ ಸೇದುವ ಲೈಟರ್ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿದ್ದು ನಾಲ್ವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ತಣ್ಣೀರುಬಾವಿಯ ಗಣೇಶ ಕಟ್ಟೆಯಲ್ಲಿ ನಡೆದಿದೆ. ಘಟನೆ ಸಂಬಂಧ ನಾಲ್ವರು ಅರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ತಿಕ್, ಸಂತೋಷ್, ಧನುಷ್, ಪ್ರಜ್ವಲ್ ಬಂಧಿತರು.

ಇದನ್ನೂ ಓದಿ: ಕುಂದಾಪುರ: ಡ್ರೈವರ್ ಇಲ್ಲದೆ ಚಲಿಸಿದ ಖಾಸಗಿ ಬಸ್‌


`ವೆಂಕಟೇಶ, ಕಾರ್ತಿಕ್, ಸಂತೋಷ್, ಸೈಫ್, ಧನುಷ್ ಪ್ರಜ್ವಲ್ ಎಂಬವರು ಮದ್ಯಪಾನ ಮಾಡಿಕೊಂಡು ಸಿಗರೇಟ್ ಸೇದುತ್ತಿದ್ದ ಸಂದರ್ಭದಲ್ಲಿ ಪ್ರೀತಂ, ನನ್ವಿತ್ ಹಾಗೂ ಇತರರು ಸ್ಥಳಕ್ಕೆ ಬಂದು ಸಿಗರ್ ಲೈಟರ್ ಕೇಳಿದ್ದರು. ಪ್ರಜ್ವಲ್ ಸಿಗರ್ ಲೈಟರನ್ನು ಪ್ರೀತಂ ಹಾಗೂ ಇತರರಿಗೆ ನೀಡಿದ್ದ. ಅದನ್ನು ಅವರು ಮರಳಿಸದಿದ್ದಾಗ ಪ್ರಜ್ವಲ್ ಅವರನ್ನು ಪ್ರಶ್ನಿಸಿದ್ದ.

ಆಗ ಆ ಗುಂಪಿನಲ್ಲಿದ್ದವನೊಬ್ಬ ಕಾರ್ತಿಕ್ ತಲೆಗೆ ಬಿಯರ್ ಬಾಟಲಿಯಿಂದ ಹೊಡೆದಿದ್ದ. ಆ ಬಳಿಕ ಎರಡು ಗುಂಪುಗಳಲ್ಲಿದ್ದವರು ಮರದ ಕೋಲುಗಳಿಂದ ಹೊಡೆದಾಡಿಕೊಂಡಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ‘ವೆಂಕಟೇಶ್, ಕಾರ್ತಿಕ್, ಸಂತೋಷ್, ಸೈಪ್, ಧನುಷ್, ಪ್ರಜ್ವಲ್ ಎಂಬವರು ಸೇರಿ ಹಲ್ಲೆ ನಡೆಸಿದ್ದಾರೆ’ ಎಂದು ಪ್ರೀತಂ ದೂರು ನೀಡಿದ್ದಾರೆ. ಆರೋಪಿಗಳಾದ ಕಾರ್ತಿಕ್, ಸಂತೋಷ್, ಧನುಷ್, ಪ್ರಜ್ವಲ್ ಎಂಬುವರನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.


ಪ್ರೀತಂ ಮತ್ತು ಸನ್ವಿತ್ ಹಾಗೂ ಇತರರು ಸೇರಿ ಹಲ್ಲೆ ನಡೆಸಿದ್ದಾರೆ ಎಂದು ಪ್ರಜ್ವಲ್ ದೂರು ನೀಡಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. ಕಾನೂನು ಸುವ್ಯವಸ್ಥೆ ಡಿ.ಸಿ.ಪಿ ಸಿದ್ದಾರ್ಥ್ ಹಾಗೂ ಸಿಸಿಬಿ ಎಸಿಪಿ ಮನೋಜ್ ನಾಯ್ಕ, ಉತ್ತರ ಉಪ ವಿಭಾಗದ ಎಸಿಪಿ ಶ್ರೀಕಾಂತ್ ಮತ್ತಿತರ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *