Tue. Jan 14th, 2025

ಅರಂತೋಡು:(ಜ.14) ಆಲೆಟ್ಟಿ ಗ್ರಾಮದ ಮಹಿಳೆಯೊಬ್ಬರು ಇಬ್ಬರು ಹೆಣ್ಣು ಮಕ್ಕಳೊಂದಿಗೆ ನಾಪತ್ತೆಯಾಗಿದ್ದು, ಈ ಬಗ್ಗೆ ಸುಳ್ಯ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: Ujire: (ಜ.17-ಜ.18) ಎಸ್ ಡಿ ಎಂ ಕಾಲೇಜಿನಲ್ಲಿ “ಪ್ರವರ್ಧಿತ ಆರ್ಥಿಕತೆಯಲ್ಲಿ ಗ್ರಾಮೀಣ ಉದ್ಯಮಶೀಲತೆಯ ಪಾತ್ರ” ಕುರಿತು ಅಂತರಾಷ್ಟ್ರೀಯ ವಿಚಾರ ಸಂಕಿರಣ

ಆಲೆಟ್ಟಿ ಗ್ರಾಮದ ಪರಿವಾರಕಾನ ನಿವಾಸಿ ನಂದಿನಿ (27 ವರ್ಷ) ಯವರು ತಮ್ಮ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಮನೆಯಿಂದ ಕಾಣೆಯಾಗಿರುವ ಬಗ್ಗೆ ಸುಳ್ಯ ಠಾಣೆಯಲ್ಲಿ ದೂರು ದಾಖಲಾಗಿದೆ.

ಪತಿ ರಾಜೇಂದ್ರ (40) ಟೈಲ್ಸ್ ಕೆಲಸ ಮಾಡುವವರಾಗಿದ್ದು ಪರಿವಾರಕಾನದಲ್ಲಿ ಕುಟುಂಬ ಸಮೇತ ವಾಸವಾಗಿದ್ದರು. ಮಕ್ಕಳು ವೈಷ್ಣವಿ (8 ವರ್ಷ) ಸೆಂಟ್‌ ಜೋಸೆಪ್‌ ಶಾಲೆ 2ನೇ ತರಗತಿ ವಿದ್ಯಾರ್ಥಿನಿ. ಇನ್ನೊಬ್ಬಾಕೆ 2 ವರ್ಷ ಪ್ರಾಯದ ಅನುಷ್ಕಾ ಅಂಗನವಾಡಿಗೆ ಹೋಗುತ್ತಿದ್ದರು.

ಕಳೆದ ಒಂದು ವಾರದ ಹಿಂದೆ ಗಂಡನು ತನ್ನ ಮೊಬೈಲ್‌ನಲ್ಲಿ ಯಾವಾಗಲು ರೀಲ್ಸ್ ನೋಡಿಕೊಂಡು ಕುಳಿತುಕೊಂಡಿರುವ ವಿಚಾರವಾಗಿ ಜಗಳವಾಗಿ ತನ್ನ ತವರು ಮನೆಗೆ ಮಕ್ಕಳೊಂದಿಗೆ ಹೋಗಿ ಬಂದಿದ್ದರು. ಇದೀಗ ಜ. 7 ರಂದು ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆ ನಡುವೆ ತನ್ನ ಮನೆಯಿಂದ ತನ್ನ ಮಕ್ಕಳೊಂದಿಗೆ ಕಾಣೆಯಾಗಿರುವುದಾಗಿ ರಾಜೇಂದ್ರ ಸುಳ್ಯ ಪೊಲೀಸರಿಗೆ ದೂರು ನೀಡಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *