ಅರಸಿನಮಕ್ಕಿ (ಜ.14): ಸೇವಾಭಾರತಿ (ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ, ಸಬಲಿನಿ ಯೋಜನೆಯಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಅರಸಿನಮಕ್ಕಿ-ಶಿಶಿಲ ಇದರ ಸಹಭಾಗಿತ್ವದೊಂದಿಗೆ ಮಹಿಳೆಯರಿಗಾಗಿ 30 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭವು ಅರಸಿನಮಕ್ಕಿ, ಅಂಗನವಾಡಿ ಕೇಂದ್ರ, ನಾವಳೆ- ಪಾಲೆಂಜದಲ್ಲಿ ಜನವರಿ 14 ರಂದು ನಡೆಯಿತು.
ಇದನ್ನೂ ಓದಿ: ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತದ ಸ್ಫೋಟಕ ಸತ್ಯ ಬಿಚ್ಚಿಟ್ಟ ಸಹೋದರ.!!!
ಅರಸಿನಮಕ್ಕಿ ಸಮಾಜ ಸೇವಕರಾದ ಶ್ರೀ ಧರ್ಮರಾಜ ಗೌಡ ಅಡ್ಕಾಡಿ ಮಹಿಳೆಯರು ತನ್ನ ಕಾಲ ಮೇಲೆ ನಿಂತುಕೊಂಡು ಸ್ವಾವಲಂಬಿಯಾಗಿ ಬದುಕು ನಡೆಸಬೇಕೆಂದು ಶಿಬಿರಾರ್ಥಿಗಳಿಗೆ ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ಸೇವಾಭಾರತಿ ಕನ್ಯಾಡಿಯ ಅಧ್ಯಕ್ಷೆ ಹಾಗೂ ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘ ಇದರ ಸಿಇಒ ಶ್ರೀಮತಿ ಸ್ವರ್ಣಗೌರಿ ಟೈಲರಿಂಗ್ ಕಲಿಯುವುದರಿಂದ ಬೇರೆ ಬೇರೆ ರೀತಿಯ ಸ್ವ – ಉದ್ಯೋಗದ ಅವಕಾಶವಿರುತ್ತದೆ.
ಪ್ರಸ್ತುತ ಕಾಲಘಟ್ಟದಲ್ಲಿ ಮಹಿಳೆಯರು ಯಾರಿಗೂ ಅವಲಂಬಿತವಾಗದೆ ಸ್ವಾವಲಂಬಿ ಜೀವನವನ್ನು ನಡೆಸುವುದು ಅತ್ಯಗತ್ಯವೆಂದು ತಿಳಿಸಿದರು.
ಅರಿಕೆಗುಡ್ಡೆ ಜೀರ್ಣೋದ್ಧಾರ ಸಮಿತಿ ಶ್ರೀ ವನದುರ್ಗ ದೇವಸ್ಥಾನದ ಅಧ್ಯಕ್ಷರಾದ ಶ್ರೀ ಪ್ರಕಾಶ್ ಪಿಲಿಕಬೆ, ಅರಸಿನಮಕ್ಕಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ.),ಮಾಜಿ ಅಧ್ಯಕ್ಷರು ಹಾಗೂ ನೂತನ ಹಾಲಿ ಸದಸ್ಯರಾದ ಶ್ರೀ ರಾಘವೇಂದ್ರ ನಾಯಕ್ ಬರ್ಗುಳ, ಅರಸಿನಮಕ್ಕಿ ಬಿಜೆಪಿ ಶಕ್ತಿಕೇಂದ್ರ ಅಧ್ಯಕ್ಷರಾದ ಶ್ರೀ ಜಯಪ್ರಸಾದ್ ಶೆಟ್ಟಿಗಾರ್, ಕನ್ಯಾಡಿ ಶ್ರೀ ದುರ್ಗಾ ಮಾತೃ ಮಂಡಳಿ ಅಧ್ಯಕ್ಷರಾದ ಶ್ರೀಮತಿ ಶಾಂತ ಪಿ. ಶೆಟ್ಟಿ, ಅರಿಕೆಗುಡ್ಡೆ ಶ್ರೀ ವನದುರ್ಗ ದೇವಸ್ಥಾನದ ಮಹಿಳಾ ಕಾರ್ಯದರ್ಶಿ ಶ್ರೀಮತಿ ನೀತಾ ರಾಧೇಶ್ ಆಚಾರ್ಯ, ನಾವಳೆ- ಪಾಲೆಂಜ ಬಾಲವಿಕಾಸ ಕೇಂದ್ರದ ಅಧ್ಯಕ್ಷರಾದ ಶ್ರೀಮತಿ ಕೇಶಾವತಿ, ನಾವಳೆ ಟೈಲರಿಂಗ್ ತರಬೇತಿದಾರರಾದ ಶ್ರೀಮತಿ ವಿಮಲ ಆರ್. ಶೆಟ್ಟಿ ಇವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಒಟ್ಟು 23 ಮಂದಿ ಶಿಬಿರಾರ್ಥಿಗಳು ಭಾಗವಹಿಸಿದ್ದರು. ಶ್ರೀಮತಿ ಪೂರ್ಣಿಮಾ ಸ್ವಾಗತಿಸಿ, ಸೇವಾಭಾರತಿಯ ಡಾಕ್ಯುಮೆಂಟೇಶನ್ ಮೋನಿಟರಿಂಗ್ ಮತ್ತು ಇವಲ್ಯೂವೇಟಿಂಗ್ ಕಾರ್ಡಿನೇಟರ್ ಸುಮ ಕಾರ್ಯಕ್ರಮ ನಿರೂಪಿಸಿ, ಶ್ರೀಮತಿ ನಮಿತಾ ಧನ್ಯವಾದವಿತ್ತರು.