ಬೆಳಗಾವಿ :(ಜ.14) ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು ಸಚಿವೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಉಜಿರೆ: ಮಧ್ಯಪ್ರದೇಶದಲ್ಲಿ ನಡೆದ 31ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ
ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಸಮೀಪ ಸಚಿರು ಕಾರ್ ನಲ್ಲಿ ತೆರಳುತ್ತಿದ್ದಾಗ ಘಟನೆ ನಡೆದಿದೆ. ಕಾರಿನಲ್ಲಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸೋದರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅಪಾಯದಿಂದ ಪಾರಾಗಿದ್ದಾರೆ.
ನಾಯಿ ಅಡ್ಡ ಬಂದ ಹಿನ್ನೆಲೆಯಲ್ಲಿ ಅದನ್ನು ತಪ್ಪಿಸಲು ಹೋಗಿ ಕಾರು ಅಪಘಾತಕ್ಕೀಡಾಗಿದೆ.
ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬೆಳಗಾವಿ ಖಾಸಗಿ ಆಸ್ಪತ್ರೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ದಾಖಲಾಗಿದ್ದಾರೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು, ಮುಖಕ್ಕೆ ಸಣ್ಣಪುಟ್ಟ ಗಾಯವಾಗಿದ್ದು, ಎಂಎಲ್ಸಿ ಚೆನ್ನರಾಜ ಹಟ್ಟಿಹೊಳಿ ತಲೆಗೆ ಗಾಯಯಾಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.