ಬೆಳ್ತಂಗಡಿ:(ಜ.14) ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಫೆಬ್ರವರಿ 9ರಿಂದ 12ರ ವರೆಗೆ ಬ್ರಹ್ಮ ಕುಂಭಾಭೀಷೇಕ ನಡೆಯಲಿದೆ. ಈ ನಿಟ್ಟಿನಲ್ಲಿ ದೈವಸ್ಥಾನದಲ್ಲಿ ವಿವಿಧ ಕಾಮಗಾರಿಗಳು ನಡೆಯುತ್ತಿದೆ.
ಇದನ್ನೂ ಓದಿ: ಉಜಿರೆ: ಉಜಿರೆಯಲ್ಲಿ ಐಶ್ವರ್ಯ ಬ್ಯಾಂಗಲ್ ಸ್ಟೋರ್ ಶುಭಾರಂಭ
ದೇವಾಲಯ, ದೈವಸ್ಥಾನಗಳ ಅಭಿವೃದ್ದಿಗೆ ಸಹಕರಿಸುತ್ತಿರುವ ಕೊಡುಗೈ ದಾನಿ, ಉದ್ಯಮಿ ಶಶಿಧರ ಶೆಟ್ಟಿ ಬರೋಡಾ ಅರಮಲೆಬೆಟ್ಟದ ದೈವಸ್ಥಾನದ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ 50 ಲಕ್ಷ ದೇಣಿಗೆಯನ್ನು ನೀಡಿದ್ದಾರೆ.
ಉದ್ಯಮಿ ಶಶಿಧರ ಶೆಟ್ಟಿ ಬರೋಡಾ ದೇವಾಲಯಗಳ ಅಭಿವೃದ್ದಿಗೆ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಯಕ್ಷಗಾನಕ್ಕೂ ಬೆಂಬಲ ನೀಡುವ ನಿಟ್ಟಿನಲ್ಲಿ ಯಕ್ಷ ಸಂಭ್ರಮ ಎನ್ನುವ ಕಾರ್ಯಕ್ರವನ್ನು ಆಯೋಜಿಸುತ್ತಿದ್ದಾರೆ.