Wed. Jan 15th, 2025

Ragini Dwivedi: ನಟಿ ರಾಗಿಣಿಗೆ ಬಿಗ್‌ ರಿಲೀಫ್‌ – ಡ್ರಗ್ಸ್ ಪ್ರಕರಣದಲ್ಲಿ ರಾಗಿಣಿ ನಿರಪರಾಧಿ

Ragini Dwivedi:(ಜ.14)ನಟಿ ರಾಗಿಣಿ ದ್ವಿವೇದಿ ಹೆಸರು ಡ್ರಗ್ಸ್ ಕೇಸ್​ನಲ್ಲಿ ತಳುಕು ಹಾಕಿಕೊಂಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ 2020ರ ಸೆಪ್ಟೆಂಬರ್​ನಲ್ಲಿ ರಾಗಿಣಿ ಅವರನ್ನು ಬಂಧಿಸಲಾಗಿತ್ತು. ಅವರು ಹಲವು ದಿನ ಜೈಲಿನಲ್ಲೂ ಕೂಡ ಇದ್ದರು.

ಇದನ್ನೂ ಓದಿ: ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ

ನಾಲ್ಕು ವರ್ಷಗಳ ಬಳಿಕ ಡ್ರಗ್ಸ್​ ಕೇಸ್​ನಲ್ಲಿ ರಾಗಿಣಿ ನಿರಪರಾಧಿ ಎಂಬುದು ಸಾಬೀತಾಗಿದೆ. ನಟಿಯ ವಿರುದ್ಧ ಯಾವುದೇ ಸಾಕ್ಷ್ಯ ಸಿಗದ ಕಾರಣ ಕೇಸ್ ಖುಲಾಸೆ ಮಾಡಿ ಹೈಕೋರ್ಟ್​ ಆದೇಶ ನೀಡಿದೆ. ಇದರಿಂದ ರಾಗಿಣಿ ಅವರು ರಿಲೀಫ್ ಆಗಿದ್ದಾರೆ.

ಡ್ರಗ್ಸ್ ಮಾಫಿಯಾದೊಂದಿಗೆ ನಂಟು ಹೊಂದಿದ ಆರೋಪ ರಾಗಿಣಿ ಮೇಲೆ ಇತ್ತು. ಪಾರ್ಟಿ ಆಯೋಜಿಸಿ ಡ್ರಗ್ಸ್ ಬಳಕೆಗೂ ಅವರು ಅವಕಾಶ ಮಾಡಿಕೊಟ್ಟಿದ್ದರು ಎನ್ನಲಾಗಿತ್ತು. ಈ ಕಾರಣಕ್ಕೆ ಎನ್​ಡಿಪಿಎಸ್ ಆ್ಯಕ್ಟ್ ಅಡಿಯಲ್ಲಿ ಅವರ ವಿರುದ್ಧ ಕೇಸ್ ದಾಖಲಿಸಲಾಗಿತ್ತು. ಆದರೆ ಈ ಬಗ್ಗೆ ಯಾವುದೇ ಸಾಕ್ಷ್ಯಾಧಾರ ಸಿಕ್ಕಿಲ್ಲ ಎನ್ನಲಾಗಿದೆ.

ಕೇವಲ ಸಹ ಆರೋಪಿಗಳ ಹೇಳಿಕೆ ಆಧರಿಸಿ ರಾಗಿಣಿ ವಿರುದ್ಧ ಕೇಸ್ ದಾಖಲಿಸಲಾಗಿತ್ತು. ಆದರೆ, ಯಾವುದೇ ಸಾಕ್ಷ್ಯಗಳನ್ನು ಒದಗಿಸಿಲ್ಲ ಎಂದು ರಾಗಿಣಿ ಪರ ವಕೀಲ ಎ. ಮೊಹಮ್ಮದ್ ತಾಹಿರ್ ವಾದ ಮಾಡಿದ್ದರು. ಈ ವಾದವನ್ನು ಪರಿಣಿಸಿದ ನ್ಯಾಮೂರ್ತಿ ಹೇಮಂತ್ ಚಂದನ್ ಗೌಡರ್ ಅವರ ನೇತೃತ್ವದ ಹೈಕೋರ್ಟ್ ಏಕಸದಸ್ಯ ಪೀಠ ಪ್ರಕರಣ ರದ್ದುಪಡಿಸಿ ಆದೇಶ ಹೊರಡಿಸಿದೆ. ಎ 4 ಪ್ರಶಾಂತ್ ರಂಕಾ ವಿರುದ್ಧದ ಪ್ರಕರಣ ಕೂಡ ರದ್ದಾಗಿದೆ.

ಡ್ರಗ್ಸ್ ಕೇಸ್ ಅವರ ವೃತ್ತಿ ಜೀವನಕ್ಕೆ ದೊಡ್ಡ ಕಪ್ಪು ಚುಕ್ಕಿ ಆಗಿತ್ತು. ಆದರೆ, ಈಗ ಅವರು ಆರೋಪ ಮುಕ್ತರಾಗಿದ್ದಾರೆ.

Leave a Reply

Your email address will not be published. Required fields are marked *