Wed. Jan 15th, 2025

Bantwal: ಬೈಕ್ ಗಳ ನಡುವೆ ಭೀಕರ ಅಪಘಾತ – ಸಹಸವಾರೆ ಆಯಿಶಾ ಮೃತ್ಯು!!

ಬಂಟ್ವಾಳ:(ಜ.15) ಬೈಕ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ನಲ್ಲಿ ಸಹಪ್ರಯಾಣಿಕೆಯಾಗಿದ್ದ ಬಾಲಕಿ ಮೃತಪಟ್ಟ ಘಟನೆ ಜ.14 ರರಾತ್ರಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ.

ಇದನ್ನೂ ಓದಿ: ಬೆಳ್ತಂಗಡಿ: ಸಂಜೆ ಮನೆಗೆ ಬರುತ್ತೇನೆ ಎಂದು ಹೇಳಿ ಹೋದ ನಾಗೇಶ್ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ!!


ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ ( 13) ಮೃತಪಟ್ಟ ಬಾಲಕಿ. ಬೈಕ್ ರೈಡರ್ ಬಾಲಕಿಯ ತಂದೆ ಅಬ್ದುಲ್ ರಹಮಾನ್ ‌ರವರಿಗೆ ಗಾಯಗಳಾಗಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಮಲ್ ಕಟ್ಟೆಯಿಂದ ಹೆದ್ದಾರಿಯಲ್ಲಿ ರಾಂಗ್ ಸೈಡ್ ನಲ್ಲಿ ಬಂದ ನೆತ್ತರಕೆರೆ ನಿವಾಸಿ ರಂಜಿತ್ ಎಂಬಾತ ಬಿ.ಸಿ.ರೋಡಿನ ಕಡೆಯಿಂದ ತುಂಬೆ ಕಡೆಗೆ ಸರಿಯಾದ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದ್ದಾನೆ.

ರಂಜಿತ್ ಗೆ ಕೂಡ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ. ಅಪಘಾತ ನಡೆದ ರಭಸಕ್ಕೆ ಬೈಕ್ ಸಂಪೂರ್ಣ ‌ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ಪಾಣೆಮಂಗಳೂರು ‌ಟ್ರಾಫಿಕ್ ಎಸ್.ಐ.ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *