Wed. Jan 15th, 2025

Belthangady: ನಿವೃತ್ತ ಮುಖ್ಯೋಪಾಧ್ಯಾಯ, ನೃತ್ಯ ಗುರು ಕಮಲಾಕ್ಷ ಆಚಾರ್ ನಿಧನ

ಬೆಳ್ತಂಗಡಿ:(ಜ.15) ನಿವೃತ್ತ ಮುಖ್ಯೋಪಾಧ್ಯಾಯ ನೃತ್ಯ ಗುರು ಕಮಲಾಕ್ಷ ಆಚಾರ್ ( 77) ಜ. 14ರಂದು ಮಂಗಳೂರಿನಲ್ಲಿ ವಯೋ ಸಹಜ ಅಸೌಖ್ಯದಿಂದ ನಿಧನ ಹೊಂದಿದ್ದಾರೆ.

ಇದನ್ನೂ ಓದಿ: ಬೆಳ್ತಂಗಡಿ: ಸಂಜೆ ಮನೆಗೆ ಬರುತ್ತೇನೆ ಎಂದು ಹೇಳಿ ಹೋದ ನಾಗೇಶ್ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ!!


2022 ರಲ್ಲಿ ಕರ್ನಾಟಕ ಸರಕಾರ ಇವರ ಸಾಧನೆಯನ್ನು ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಪುರಸ್ಕರಿಸಿತ್ತು. ಅವರು ತಾಲೂಕಿನ ಪ್ರಥಮ ಭರತನಾಟ್ಯ ಗುರುವಾಗಿದ್ದರು.

ಬೆಳ್ತಂಗಡಿಯಲ್ಲಿ ನೃತ್ಯ ನಿಕೇತನ ಸಂಸ್ಥೆಯನ್ನು ಆರಂಭಿಸಿ ಸಾವಿರಾರು ವಿದ್ಯಾರ್ಥಿಗಳಿಗೆ ಭರತನಾಟ್ಯ ತರಬೇತಿ ನೀಡಿದ್ದರು. ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಮುಖ್ಯ ಶಿಕ್ಷಕರಾಗಿ, ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.

2021- 22ನೇ ಸಾಲಿನ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಪ್ರಶಸ್ತಿಯನ್ನು ಪಡೆದಿದ್ದರು. ಇವರು ಇಬ್ಬರು ಪುತ್ರಿಯರು ಹಾಗೂ ಸಾವಿರಾರು ಮಂದಿ ಶಿಷ್ಯರನ್ನು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *