ಕಡಬ:(ಜ.17) ಧ್ರಮಸ್ಥಳ – ಸುಬ್ರಮಣ್ಯ ರಾಜ್ಯ ಹೆದ್ದಾರಿಯ ಪೇರಡ್ಕ ಸಮೀಪ ಸವಾರನ ನಿಯಂತ್ರಣ ತಪ್ಪಿ ಮೋರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಶಾಲಾ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಜ.17 ರಂದು ನಡೆದಿದೆ.
ಇದನ್ನೂ ಓದಿ: ಬೆಳ್ತಂಗಡಿ: ನಿಯಂತ್ರಣ ತಪ್ಪಿ ಮಗುಚಿ ಬಿದ್ದ ದ್ವಿ ಚಕ್ರ ವಾಹನ
ಮೃತ ಬಾಲಕನನ್ನು ಪೇರಡ್ಕದ ಖಾಸಗಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ, ನೂಜಿಬಾಳ್ತಿಲ ಗ್ರಾಮದ ಹೊಸಮನೆ ಕಾನ ನಿವಾಸಿ ವಿಶ್ವನಾಥ್ ಎಂಬುವವರ ಪುತ್ರ ಆಶೀಶ್(16 ವ) ಎಂದು ಗುರುತಿಸಲಾಗಿದೆ.
ಮನೆಯಿಂದ ಶಾಲೆಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು, ಬಾಲಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರೂ, ದಾರಿ ಮಧ್ಯೆ ಮೃತಪಟ್ಟಿರುವುದಾಘಿ ತಿಳಿದುಬಂದಿದೆ.