ಧರ್ಮಸ್ಥಳ:(ಜ.18) ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ.3 ರಂದು 53 ನೇ ವರ್ಷದ ಉಚಿತ ಸಾಮೂಹಿಕ ವಿವಾಹವು ಸಂಜೆ 6.48ರ ಗೋಧೂಳಿ ಲಗ್ನದಲ್ಲಿ ನಡೆಯಲಿದೆ.
ಇದನ್ನೂ ಓದಿ: ಬೆಳಾಲು:(ಫೆ.1) ಡಿ.ಪಿ. ಸ್ಪೋರ್ಟ್ಸ್ ಕ್ಲಬ್ ಬೆಳಾಲು ಇದರ ಆಶ್ರಯದಲ್ಲಿ
ವರನಿಗೆ ಧೋತಿ, ಶಾಲು, ವಧುವಿಗೆ ಸೀರೆ, ರವಿಕೆ ಕಣ, ಮಂಗಳಸೂತ್ರ ಹೂವಿನ ಹಾರ ನೀಡಲಾಗುವುದು.
ಎರಡನೇ ವಿವಾಹಕ್ಕೆ ಅವಕಾಶವಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯ ಮೂಲಕ ಮಾಡಲಾಗುವುದು.
ಆಸಕ್ತರು 2025 ಎ.25 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ 08256-266644 ಸಂಖ್ಯೆಯನ್ನು ಸಂಪರ್ಕಿಸುವಂತೆ ಕ್ಷೇತ್ರದ ಪ್ರಕಟಣೆ ತಿಳಿಸಿದೆ.