Sat. Jan 18th, 2025

ಕುಂದಾಪುರ:(ಜ.18) ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಳ್ಳೂರು ಎಂಬಲ್ಲಿ ನಡೆದಿದೆ. ವಿನಯ್ ಭಂಡಾರಿ ಎಂಬವರ ಪತ್ನಿ ಶೃತಿ (33) ಮೃತ ಮಹಿಳೆ.

ಇದನ್ನೂ ಓದಿ: Mangaluru : ಉಳ್ಳಾಲ ಬ್ಯಾಂಕಿನಲ್ಲಿ ದರೋಡೆ ಪ್ರಕರಣ


ಶೃತಿ ಹಾಗೂ ವಿನಯ್ ಅಂತರ್ಜಾತಿ ವಿವಾಹವಾಗಿದ್ದರು. ಸಾಲಿಗ್ರಾಮದ ಮೂಲದ ಶೃತಿ ಬ್ರಾಹ್ಮಣರಾಗಿದ್ದು ಕಾಲೇಜು ಸಂದರ್ಭದಲ್ಲಿ ವಿನಯ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಪ್ರಸ್ತುತ ಬಳ್ಳೂರು ಸಮೀಪದ ಬಿಹೆಚ್ ಎಂಬಲ್ಲಿ ನೆಲೆಸಿದ್ದ ವಿನಯ್ ಹಾಗೂ ಶೃತಿ ದಂಪತಿ, ಬಳ್ಳೂರಿನಲ್ಲಿ ಜಾಗ ಖರೀದಿ ಮಾಡಿದ್ದರು ಎನ್ನಲಾಗಿದೆ.

ಈ ಸಂಬಂಧ ಬುಧವಾರ ಜಾಗದ ನೋಂದಣಿಗೆ ಹೋಗಿ ಬಂದಿದ್ದರು. ಬಳಿಕ ಶ್ರುತಿ ಅವರು ತನ್ನ ಸ್ಕೂಟಿಯಲ್ಲಿ ಬಳ್ಳೂರು ಸಮೀಪದ ಹೊಳೆಯ ಬದಿಗೆ ಹೋಗಿದ್ದು ಅಲ್ಲಿ ಸ್ಕೂಟಿಯನ್ನು ನಿಲ್ಲಿಸಿ, ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.


ಘಟನೆ ತಿಳಿದ ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ಶೋಧ ಕಾರ್ಯ ನಡೆಸಿದ್ದಾರೆ. ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಸರಿಯಾದ ಕಾರಣ ತಿಳಿದು ಬಂದಿಲ್ಲ. ಆದರೆ ಯಾವುದೋ ಹಣಕಾಸಿನ ವ್ಯವಹಾರದಲ್ಲಿ ಮೋಸವಾಗಿರುವ ಬಗ್ಗೆ ಅಲ್ಲಲ್ಲಿ ಚರ್ಚೆಗಳು ನಡೆಯುತ್ತಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಶೃತಿ ಅವರಿಗೆ ಹತ್ತನೇ ತರಗತಿ ಓದುತ್ತಿರುವ ಪುತ್ರಿ ಇದ್ದಾರೆ.

Leave a Reply

Your email address will not be published. Required fields are marked *