ಬಾಲಿವುಡ್ ನಟ ಸೈಫ್ ಅಲಿ ಖಾನ್ ತಮ್ಮ ಮುಂಬೈನ ಮನೆಯಲ್ಲಿ ಗುರುವಾರ ಮುಂಜಾನೆ ಚಾಕು ಇರಿತಕ್ಕೊಳಗಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ನಟನಿಗೆ ಸರ್ಜರಿ ನಡೆಸಲಾಗಿದ್ದು, ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ. ಈ ಬೆನ್ನಲ್ಲೇ ಚಾಕು ಇರಿತ ಘಟನೆಗೆ ಈಗ ಹೊಸ ಟ್ವಿಸ್ಟ್ ಸಿಕ್ಕಿದೆ. ಮನೆಕೆಲಸದಾಕೆ ಜೊತೆಗಿನ ಅಫೇರ್ ಈ ಎಲ್ಲಾ ಘಟನೆಗೆ ಕಾರಣ ಎಂದು ಸುದ್ದಿ ಹರಿದಾಡುತ್ತಿದೆ.
ಇದನ್ನೂ ಓದಿ: ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಶುಭಮಸ್ತು” ಕಾರ್ಯಕ್ರಮ
ನಟನ ಮನೆಗೆ ನುಗ್ಗಿದ ಆರೋಪಿ ಮೊದಲು ಮನೆ ಕೆಲಸದವರ ಜೊತೆ ಕಳ್ಳ ದಾಳಿ ನಡೆಸಲು ಮುಂದಾಗಿದ್ದ. ಈ ವೇಳೆ ಸೈಫ್ ರಕ್ಷಿಸಲು ಹೋದಾಗ ಅವರ ಮೇಲೆ ಚಾಕುವಿನಿಂದ ಇರಿದು ದಾಳಿ ಮಾಡಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿತ್ತು.ಈಗ ಪೊಲೀಸರು ವಿಶೇಷ ತಂಡ ರಚಿಸಿ ತನಿಖೆ ನಡೆಸುತ್ತಿದ್ದಾರೆ. ಈ ನಡುವೆ ದುಷ್ಕರ್ಮಿಗೆ ಮನೆ ಕೆಲಸದಾಕೆಯ ಜೊತೆ ಅಫೇರ್ ಇದ್ದಿದ್ದೇ ಈ ಎಲ್ಲಾ ಗಲಾಟೆಗೆ ಕಾರಣ ಎನ್ನಲಾಗುತ್ತಿದೆ.
ಆರೋಪಿ ಮನೆಗೆ ನುಗ್ಗಿದಾಗ ಮನೆಕೆಲಸದಾಕೆ ಗಲಾಟೆ ಮಾಡಿದ್ದಾಳೆ. ಇಬ್ಬರ ನಡುವೆ ಗಲಾಟೆ ನಡೆಯುತ್ತಿದ್ದಾಗ ಸೈಫ್ ಬಿಡಿಸಲು ಹೋಗಿದ್ದಾರೆ. ಆಗ ಸೈಫ್ ಮೇಲೆಯೇ ಹಲ್ಲೆ ನಡೆಸಲಾಗಿದೆ ಎಂದು ವರದಿಯಾಗುತ್ತಿದೆ. ದಾಳಿ ಮಾಡಿದ ವ್ಯಕ್ತಿಯೂ ಅಪಾರ್ಟ್ ಮೆಂಟ್ ಒಳಗೆ ಇರುವ ವ್ಯಕ್ತಿಯೇ ಇರಬಹುದು ಎಂದು ಶಂಕಿಸಲಾಗಿದೆ.
ಇನ್ನೂ ಈ ನಡುವೆ ಇಡೀ ಘಟನೆಗೆ ಸಂಬಂಧಿಸಿದಂತೆ ಬೇರೆ ಬೇರೆ ರೀತಿಯ ಊಹಾಪೋಹಗಳೇ ಹರಿದಾಡುತ್ತಿವೆ. ಸೈಫ್ ಮನೆಯಲ್ಲಿ ಕೆಲಸ ಮಾಡುತ್ತಿರುವಾಕೆ ಪೊಲೀಸರಲ್ಲಿ ಹೇಳಿದಂತೆ ಆ ಕಳ್ಳ ಒಂದು ಕೋಟಿ ರೂಪಾಯಿಗೆ ಡಿಮ್ಯಾಂಡ್ ಮಾಡಿದ್ದ ಎನ್ನಲಾಗಿದೆ.
ಆರೋಪಿ ಮೊದಲಿಗೆ ಸೈಫ್ ಎರಡನೇ ಪುತ್ರ ಜೆಹ್ ರೂಮಿನ ಒಳಗೆ ನುಗ್ಗಿದ್ದಾನೆ. ಮಗುವಿನ ಹತ್ತಿರ ಹೋಗುತ್ತಿದ್ದಂತೆ ರೂಮಿನ ನೆಲದ ಮೇಲೆ ಮಲಗಿದ್ದ ಕೆಲಸದಾಕೆ ಕೂಗಲು ಶುರು ಮಾಡಿದ್ದಾರೆ. ಈ ವೇಳೆ ಬ್ಲೇಡ್ ನಿಂದ ಹಲ್ಲೆ ನಡೆಸಿರುವ ಆರೋಪಿ, ಶಬ್ದ ಮಾಡದಂತೆ ಬೆದರಿಸಿದ್ದಾನೆ. ನಿನಗೇನು ಬೇಕೆಂದು ಕೇಳಿದಾಗ ರೂ.1 ಕೋಟಿ ಕೇಳಿದ್ದ.
ಇದೇ ವೇಳೆ ಸೈಫ್ ಹಾಗೂ ಕರೀನಾ ಅವರು ಕೂಡ ಸ್ಥಳಕ್ಕೆ ಬಂದು ರಕ್ಷಣೆಗೆ ಧಾವಿಸಿದರು. ಈ ವೇಳೆ ಸೈಫ್ ಅವರ ಮೇಲೆ ಹಲ್ಲೆ ನಡೆಸಿದ. ಬಳಿಕ ಮನೆಯ ಇತರರು ಎಚ್ಚರಗೊಳ್ಳಲು ಆರಂಭವಾದಾಗ ಸ್ಥಳದಿಂದ ಪರಾರಿಯಾದ ಎಂದು ಕೆಲಸದಾಕೆ ಪೊಲೀಸರ ಬಳಿ ಹೇಳಿಕೆ ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.