Mon. Jan 20th, 2025

Mumbai: ಸೈಫ್‌ ಅಲಿ ಖಾನ್‌ಗೆ ಚಾಕು ಇರಿತ ಪ್ರಕರಣ – ಆರೋಪಿ ಬಂಧನ

ಮುಂಬೈ:(ಜ.19) ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿಯನ್ನು ಮಹಾರಾಷ್ಟ್ರದ ಥಾಣೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಉಳ್ಳಾಲ: ಕೋಟೆಕಾರು ಬ್ಯಾಂಕ್‌ ದರೋಡೆ ಪ್ರಕರಣ

ಬಂಧಿತ ಆರೋಪಿಯನ್ನು ಮೊಹಮ್ಮದ್ ಸರಿಫುಲ್ ಇಸ್ಲಾಂ ಶೆಹಜಾದ್ ಎಂದು ಗುರುತಿಸಲಾಗಿದೆ. ಆತನನ್ನು ಸೈಫ್ ನಿವಾಸದಿಂದ ಸುಮಾರು 35 ಕಿಲೋಮೀಟರ್ ದೂರದಲ್ಲಿರುವ ಕಾಸರ್ವಾಡವಲಿಯ ಹಿರಾನಂದಾನಿ ಎಸ್ಟೇಟ್ ಬಳಿ ಬಂಧಿಸಲಾಗಿದೆ.
ದುಷ್ಕರ್ಮಿ ಥಾಣೆಯ ಬಾರ್‌ನಲ್ಲಿ ಕೆಲಸ ಮಾಡುತ್ತಿದ್ದ. ಪೊಲೀಸರಿಗೆ ಸಿಕ್ಕಿಬೀಳುವ ಭಯದಿಂದ ಆತ ತನ್ನ ಹೆಸರನ್ನು ವಿಜಯ್ ದಾಸ್ ಎಂದು ಹೇಳಿಕೊಂಡಿದ್ದ ಎಂದು ಮೂಲಗಳು ತಿಳಿಸಿವೆ.

ಗುರುವಾರ ಮುಂಜಾನೆ ಬಾಂದ್ರಾದಲ್ಲಿರುವ ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿ ಆರೋಪಿ ದಾಳಿ ನಡೆಸಿದ್ದ. ಆರು ಬಾರಿ ಇರಿತಕ್ಕೊಳಗಾಗಿದ್ದ ಸೈಫ್‌ ಅವರನ್ನು ಆಟೋರಿಕ್ಷಾದಲ್ಲಿ ನಗರದ ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಬಳಿಕ ಅಲ್ಲಿ ಅವರಿಗೆ ತುರ್ತು ಶಸ್ತ್ರಚಿಕಿತ್ಸೆ ನೀಡಿ, ಐದು ಗಂಟೆಗಳ ಕಾಲ ನಡೆದ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಬಳಿಕ ಅವರ ಬೆನ್ನುಮೂಳೆಯಿಂದ 2.5 ಇಂಚಿನ ಚಾಕುವಿನ ತುಂಡನ್ನು ತೆಗೆಯಲಾಗಿತ್ತು.

ಸೈಫ್ ಅಲಿ ಖಾನ್ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ. ಇನ್ನೂ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಆಕಾಶ್ ಕೈಲಾಶ್ ಕನ್ನೋಜಿಯಾ ಎಂಬ ಶಂಕಿತನನ್ನು ಛತ್ತೀಸ್‌ಗಢದ ದುರ್ಗ್ ರೈಲು ನಿಲ್ದಾಣದಲ್ಲಿ ಬಂಧಿಸಲಾಗಿತ್ತು.

Leave a Reply

Your email address will not be published. Required fields are marked *