Mon. Jan 20th, 2025

Ullal: ಕೋಟೆಕಾರು ಬ್ಯಾಂಕ್‌ ದರೋಡೆ ಪ್ರಕರಣ – ಚಿನ್ನ ವಾಪಸ್ ಕೊಡುವಂತೆ ಗ್ರಾಹಕರ ಒತ್ತಡ!!

ಉಳ್ಳಾಲ(ಜ.19): ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘ ಕೆ.ಸಿ. ರೋಡ್ ಶಾಖೆ ದರೋಡೆ ಪ್ರಕರಣದಿಂದ ಚಿನ್ನ ಅಡ ಇಟ್ಟಿರುವ ಗ್ರಾಹಕರು ದಿಗಿಲುಗೊಂಡು ಶನಿವಾರ ಬೆಳಗ್ಗೆ ಬ್ಯಾಂಕ್‌ಗೆ ಮುಗಿ ಬಿದ್ದಿದ್ದು, ನಮ್ಮ ಚಿನ್ನ ವಾಪಸ್ ಕೊಡಿ ಎಂದು ಆಗ್ರಹಿಸಿದರು.

ಇದನ್ನೂ ಓದಿ: ಮಂಗಳೂರು: ಒಎನ್ ಜಿಸಿ ಎಂಆರ್ ಪಿಎಲ್ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಚಾಲನೆ

ಮಕ್ಕಳನ್ನು ವಿದೇಶಕ್ಕೆ ಕಳುಹಿಸಲು, ಮನೆ ಖರೀದಿ ಹೀಗೆ ವಿವಿಧ ಕಾರಣಗಳಿಗೆ ಚಿನ್ನ ಅಡವಿಟ್ಟು ಹಣ ಪಡೆದಿದ್ದೇವೆ ಎಂದ ಗ್ರಾಹಕರು, ಕಳೆದ ಬಾರಿ ಇದೇ ಬ್ಯಾಂಕಿನಲ್ಲಿ ಚಿನ್ನ ಕಳೆದುಕೊಂಡಾಗ ಪರಿಹಾರ ನೀಡಿಲ್ಲ. ಈ ಬಾರಿ ಹಾಗೆ ಆಗಬಾರದು ಎಂದರು.

ಈವರೆಗೆ ನಮ್ಮ ಪ್ರಕಾರ 10-12 ಕೋಟಿ ರು. ಮೌಲ್ಯದ ಆಗಿದೆ. ಮಹಜರು ನಂತರ ನಿಖರ ಮಾಹಿತಿ ಸಿಗಲಿದೆ. ಇದರಲ್ಲಿ ನಮ್ಮ ಯಾವುದೇ ಸಿಬ್ಬಂದಿ ಭಾಗಿಯಾಗಿಲ್ಲ. ನಾವು ಗ್ರಾಹಕರ ಚಿನ್ನ ವಾಪಸ್ ಕೊಡುತ್ತೇವೆ ಎಂದು ಬ್ಯಾಂಕ್ ಅಧ್ಯಕ್ಷ ಕೃಷ್ಣ ಶೆಟ್ಟಿ ತಿಳಿಸಿದ್ದಾರೆ.

ಒಂದು ಕಾರನ್ನು ರಾಷ್ಟ್ರೀಯ ಹೆದ್ದಾರಿ ಬಳಿ ನಿಲ್ಲಿಸಿ ಒಂದೇ ಕಾರಿನಲ್ಲಿ ಕೆ.ಸಿ.ರೋಡ್‌ಗೆ ತೆರಳಿದ್ದ ತಂಡ, ಕೃತ್ಯ ಮುಗಿಸಿ ನಾಲ್ವರನ್ನು ತಲಪಾಡಿ ಬಳಿ ಪಾರ್ಕ್ ಮಾಡಿದ್ದ ಕಾರಿನ ಬಳಿ ಇಳಿಸಿರುವ ಶಂಕೆಯಿದೆ. ಬಳಿಕ ಚಿನ್ನದ ಮೂಟೆ ಹೊಂದಿದ್ದ ಗೋಣಿಗಳ ಸಹಿತ ಇಬ್ಬರು ತಲಪಾಡಿ ಟೋಲ್ ಮೂಲಕ ಕೇರಳಕ್ಕೆ ತೆರಳಿರುವ ಸಾಧ್ಯತೆಗಳಿದ್ದು, ಪೊಲೀಸರ ತನಿಖೆ ದಾರಿ ತಪ್ಪಿಸಲೆಂದೇ ಇಂತಹ ಚಿತ್ರಣ ಸೃಷ್ಟಿಸಿದ್ದಾರೆ ಎನ್ನಲಾಗಿದೆ.

ಬ್ಯಾಂಕ್ ದರೋಡೆ ಪ್ರಕರಣದ ಆರೋಪಿಗಳು ಎರಡು ತಂಡಗಳಾಗಿ ಒಂದು ಕಾರು ಕೇರಳ ಕಡೆಗೆ ಹಾಗೂ ಇನ್ನೊಂದು ಕಾರು ಮಂಗಳೂರು ಮಾರ್ಗವಾಗಿ ಬಿ.ಸಿ.ರೋಡ್ ಮೂಲಕ ತೆರಳಿ ರುವ ಶಂಕೆ ತನಿಖಾ ತಂಡಗಳಿಂದ ವ್ಯಕ್ತವಾಗಿದೆ.
ಈ ನಡುವೆ ದರೋಡೆಕೋರರ ಪತ್ತೆಗೆ ಪೊಲೀಸ್ ಇಲಾಖೆಯಿಂದ ಐದು ತನಿಖಾ ತಂಡ ರಚಿಸಲಾಗಿದೆ. ಮಂಗಳೂರು ದಕ್ಷಿಣ ಎಸಿಪಿ, ಸುರತ್ಕಲ್, ಕಾವೂರು, ಉಳ್ಳಾಲ ಮತ್ತು ಸಿಸಿಬಿ ಪೊಲೀ ಸ್ ತಂಡಗಳು ದರೋಡೆಕಾರರ ಹಿಂದೆ ಬಿದ್ದಿದೆ. ಬ್ಯಾಂಕ್ ಎದುರುಗಡೆಯ ಸಿಸಿಟಿವಿ ದೃಶ್ಯದಲ್ಲಿ ಮಂದಿಯೂ ನಗದು-ಚಿನ್ನಾ ಭರಣ ಸಮೇತ ಕಾರಿನಲ್ಲಿ ಪರಾರಿಯಾಗುವುದು ಪತ್ತೆಯಾದರೆ, ತಲಪಾಡಿ ಟೋಲ್‌ನಲ್ಲಿ ಸಿಕ್ಕ ದೃಶ್ಯದಲ್ಲಿ ಕಾರಿನಲ್ಲಿ ಓರ್ವನೇ ಇರುವುದು ಕಂಡುಬಂದಿದೆ.

ದರೋಡೆ ತಂಡದ ಕಾರಿನಿಂದ ಸುಂಕ ಪಡೆದಿರುವ ಟೋಲ್ ಸಿಬ್ಬಂದಿ ಪ್ರಕಾರ ಕಾರಿನಲ್ಲಿ ಓರ್ವ ಹಿಂದುಗಡೆ ಕುಳಿತಿದ್ದರೆ, ಇನ್ನೋರ್ವ ಚಲಾ ಯಿಸುತ್ತಿದ್ದಿರುವುದನ್ನು ಗಮನಿಸಿದ್ದಾರೆ. ಹಾಗಾಗಿ ಒಂದು ಕಾರು ತಲಪಾಡಿ ಮಾರ್ಗವಾಗಿ ಕೇರಳ ಹೊಸಂಗಡಿಯತ್ತ ತೆರಳಿ ಅಲ್ಲಿಂದ ಎಡಕ್ಕೆ ತಿರುಗಿದ್ದು ತಿಳಿದು ಬಂದಿದೆ.

ಹೀಗಾಗಿ ತಂಡ ಕೇರಳಕ್ಕೆ ತೆರಳಿರುವ ಸಾಧ್ಯವಿದೆ. ಇನ್ನೂ ನಾಲ್ವರು ಆರೋಪಿಗಳು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೆ.ಸಿ.ರೋಡ್‌ನಿಂದ ತಲಪಾಡಿವರೆಗೆ ಸಿಸಿಟಿವಿ ಇಲ್ಲದ ಕಡೆ ಕಾರಿನಿಂದ ಬೇರೊಂದು ಕಾರಿಗೆ ಬದಲಾವಣೆಗೊಂಡು ಚಿನ್ನ ದೊಂದಿಗೆ ಮಂಗಳೂರು ಮಾರ್ಗವಾಗಿ ಬಿ.ಸಿ. ರೋಡ್ ಮೂಲಕ ತೆರಳಿರುವ ಶಂಕೆ ಇದೆ.

Leave a Reply

Your email address will not be published. Required fields are marked *