ಬಂಟ್ವಾಳ :(ಜ.21) ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಕೋಟಿ ಚೆನ್ನಯ ಕ್ರೀಡೋತ್ಸವದ ಪ್ರಯುಕ್ತ ಭಾರತೀಯ ಅಂಚೆ ಇಲಾಖೆಯ ಜನ ಸಂಪರ್ಕ ಅಭಿಯಾನ ಶಿಬಿರ ಆಯೋಜಿಸಲಾಗಿತ್ತು.
ಇದನ್ನೂ ಓದಿ: ಬೆಳ್ತಂಗಡಿ: ಹರಿಪ್ರಸಾದ್ ಹೊಸಂಗಡಿ ಅವರಿಗೆ ತಾಲೂಕು ಯುವಜನ ಒಕ್ಕೂಟದಿಂದ ಶ್ರದ್ಧಾಂಜಲಿ
ಯುವವಾಹಿನಿ ಬಂಟ್ವಾಳ ಘಟಕದ ಮಾದರಿ ಕಾರ್ಯ ಶ್ಲಾಘನೀಯ : ವಿದ್ಯಾ ರಾಕೇಶ್
ಯುವವಾಹಿನಿ ಬಂಟ್ವಾಳ ಘಟಕವು ಕೋಟಿ ಚೆನ್ನಯ ಕ್ರೀಡೋತ್ಸವದ ಐತಿಹಾಸಿಕ ಕಾರ್ಯಕ್ರಮದಲ್ಲಿ ಜನತೆಗೆ ಸ್ಪಂದಿಸುವ ಆಧಾರ್ ನೊಂದಣಿ, ತಿದ್ದುಪಡಿ ಹಾಗೂ ಅಂಚೆ ಇಲಾಖೆಯ ಅಪಘಾತ ವಿಮೆ ನೊಂದಣಿಯಂತಹ ಸಮಾಜಮುಖಿ ಕಾರ್ಯ ಶ್ಲಾಘನೀಯ ಎಂದು ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷೆ ವಿದ್ಯಾ ರಾಕೇಶ್ ತಿಳಿಸಿದರು.
ಯುವವಾಹಿನಿ ಬಂಟ್ವಾಳ ಘಟಕ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.
ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು
ಯುವವಾಹಿನಿ ಬಂಟ್ವಾಳ ಘಟಕದ ಪದಾಧಿಕಾರಿಗಳು, ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬೆಳಗ್ಗೆ 10 ಗಂಟೆಯಿಂದ ಸಂಜೆ 5 ರವರೆಗೆ ನಡೆದ ಶಿಬಿರದಲ್ಲಿ ಒಟ್ಟು 424 ಶಿಬಿರಾರ್ಥಿಗಳು ಆಧಾರ್ ತಿದ್ದುಪಡಿ ನೊಂದಣಿ ಹಾಗೂ ಅಂಚೆ ಇಲಾಖೆಯ ವಿಮಾ ಸೌಲಭ್ಯಗಳ ಪ್ರಯೋಜನ ಪಡೆದರು.