ಉಡುಪಿ:(ಜ.21) ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್’ಗೆ ದಾಳಿ ನಡೆಸಿ ಮಹಿಳೆಯನ್ನು ರಕ್ಷಿಸಿ ಪೊಲೀಸರು ಓರ್ವನನ್ನು ವಶಕ್ಕೆ ಪಡೆದ ಘಟನೆ ಮಣಿಪಾಲದಲ್ಲಿ ನಡೆದಿದೆ.
ಇದನ್ನೂ ಓದಿ: ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಅಂಚೆ ಜನ ಸಂಪರ್ಕ ಅಭಿಯಾನ ಶಿಬಿರ
ಜನವರಿ 19 ರಂದು ಪೊಲೀಸ್ ನಿರೀಕ್ಷಕರಾದ ರಾಮಚಂದ್ರ ನಾಯಕ್ ಪರ್ಕಳ ಬಸ್ ನಿಲ್ದಾಣದ ಹಿಂಭಾಗದಲ್ಲಿ ಇರುವ ಶ್ರೀ ಸಾಯಿ ಲಾಡ್ಜ್ ನ ರಲ್ಲಿ ಅಕ್ರಮ ಲಾಭಕ್ಕಾಗಿ ಬಲವಂತವಾಗಿ ಮಹಿಳೆಯರನ್ನು ಇರಿಸಿ ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ
ಎಂದು ಸಿಕ್ಕ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ನೊಂದ ಮಹಿಳೆಯನ್ನು ರಕ್ಷಿಸಿ ಆರೋಪಿ ಶರಣಪ್ಪ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.