ಬೆಳ್ತಂಗಡಿ,ಜ.(22) : ಜನವರಿ 30 ರಂದು ಬೃಹತ್ ದ್ಸಿಕ್ರ್ ಮಜ್ಲಿಸ್ ಹಾಗೂ ಮುಸಾಫಿರ್ ಖಾನ ಕಟ್ಟಡ ಉದ್ಘಾಟನೆ ಹಾಗೂ ಜ.24 ರಿಂದ ಫೆಬ್ರವರಿ 2 ರವರೆಗೆ ಉರೂಸ್ ಸಮಾರೋಪ – ಮಹಾ ಅನ್ನದಾನ ಸೇವೆ ನಡೆಯಲಿದೆ.
ಇದನ್ನೂ ಓದಿ: ಉಜಿರೆ:(ಜ.26) ಎಸ್.ಡಿ.ಎಮ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರಿಂದ
ಈ ಕುರಿತು ಬೆಳ್ತಂಗಡಿಯ ಸುದ್ದಿಗೋಷ್ಠಿಯಲ್ಲಿ ಉರೂಸ್ ಸಮಿತಿ ಅಧ್ಯಕ್ಷ ಕೆ.ಯು ಇಬ್ರಾಹಿಂ ಅವರು ಮಾತನಾಡಿ, ಸುಮಾರು 8 ಶತಮಾನಗಳಿಗೂ ಅಧಿಕ ವರ್ಷಗಳ ಇತಿಹಾಸವಿರುವ ದಕ್ಷಿಣ ಭಾರತದ ಅಜ್ಜರ್ ಎಂದೇ ಖ್ಯಾತಿವೆತ್ತಿರುವ
ಸರ್ವ ಧರ್ಮೀಯರ ಸಮನ್ವಯ ಕೇಂದ್ರ ಕಾಜೂರು ದರ್ಗಾ ಶರೀಫ್‌ನಲ್ಲಿ ಈ ವರ್ಷದ ಉರೂಸ್ ಮಹಾ ಸಂಭ್ರಮವು. ಜ.24 ರಿಂದ ಆರಂಭಗೊಂಡು ಫೆಬ್ರವರಿ 2 ರ ವರೆಗೆ ವಿವಿಧ ಧಾರ್ಮಿಕ ಸಾಮಾಜಿಕ ಶೈಕ್ಷಣಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಎಂದಿನಂತೆ ಕಾಜೂರು ಮತ್ತು ಕಿಲ್ಲೂರು ಜಂಟಿ ಜಮಾಅತ್‌ಗಳ ಆಶ್ರಯದಲ್ಲಿ ರಚನೆಯಾಗಿರುವ ಉರೂಸ್ ಸಮಿತಿಯ ನೇತೃತ್ವದಲ್ಲಿ ಉರೂಸ್ ಕಾರ್ಯಕ್ರಮಗಳು ನಡೆಯಲಿದೆ ಎಂದರು.
ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಉರೂಸ್ ಸಮಿತಿ ಅಧ್ಯಕ್ಷ ಕೆ.ಇಬ್ರಾಹಿಂ ಕಾಜೂರು, ಉರೂಸ್ ಸಮಿತಿ ಉಪಾಧ್ಯಕ್ಷ ಅಬ್ದುಲ್ ಅಝೀಝ್ ಕಿಲ್ಲೂರು, ಉರೂಸ್ ಸಮಿತಿ ಪ್ರ.ಕಾರ್ಯದರ್ಶಿ ಜೆ.ಹೆಚ್ ಅಬೂಬಕ್ಕರ್ ಸಿದ್ದೀಕ್ ಕಾಜೂರು,
ಉರೂಸ್ ಸಮಿತಿ ಕೋಶಾಧಿಕಾರಿ ಮುಹಮ್ಮದ್ ಕಮಾಲ್, ದುರ್ಗಾಸಮಿತಿ ಉಪಾಧ್ಯಕ್ಷ ಬದ್ರುದ್ದೀನ್ ಕಾಜೂರು ,ಕಿಲ್ಲೂರು ಮಸ್ಜಿದ್ ಕೋಶಾಧಿಕಾರಿ ಅಬೂಬಕ್ಕರ್ ಮಲ್ಲಿಗೆ ಮನೆ ಉಪಸ್ಥಿತರಿದ್ದರು.