ಉಡುಪಿ:(ಜ.23) ವ್ಯಕ್ತಿಯೊಬ್ಬರು ಗಂಗೊಳ್ಳಿ ಗ್ರಾಮ ಪಂಚಾಯತ್‌ನಲ್ಲಿ ತಮ್ಮ ಜಾಗದ ದಾಖಲೆಗಳೊಂದಿಗೆ 9/11 ಗಾಗಿ ಅರ್ಜಿ ಸಲ್ಲಿಸಿದ್ದು, ಈ ಬಗ್ಗೆ ಗಂಗೊಳ್ಳಿ ಗ್ರಾಮ ಪಂಚಾಯತ್‌ಗೆ ಭೇಟಿ ನೀಡಿದಾಗ
ಇದನ್ನೂ ಓದಿ: Uppinangadi: ಶ್ರೀಮಂತನೆಂದು ಹೇಳಿ ಹಿಂದೂ ಯುವತಿಯನ್ನು ವರಿಸಿದ ಮುಸ್ಲಿಂ ಯುವಕ!!
ಅಲ್ಲಿನ ಪಿ.ಡಿ.ಓ ರವರಾದ ಶ್ರೀ. ಉಮಾಶಂಕರ್ ಮತ್ತು ದ್ವಿತೀಯ ದರ್ಜೆ ಗುಮಾಸ್ತ ಶೇಖರ್ ಜಿ. ಇವರನ್ನು ಭೇಟಿ ಮಾಡಿ ವಿಚಾರಿಸಿದಾಗ ಸದರಿ 9/11 ನ್ನು ನೀಡಲು ರೂ. 27,000/- ರೂಪಾಯಿ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಆದರೆ ಕಾನೂನು ಬದ್ಧವಾಗಿ ಮಾಡಬೇಕಾದ ಸರ್ಕಾರಿ ಕೆಲಸಕ್ಕೆ ಲಂಚ ನೀಡಿ ಕೆಲಸ ಮಾಡಿಸಿಕೊಳ್ಳಲು ದೂರುದಾರರಿಗೆ ಇಚ್ಛೆ ಇಲ್ಲದ ಕಾರಣ ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಜ.22 ರ ಬೆಳಿಗ್ಗೆ ಗಂಗೊಳ್ಳಿ ಗ್ರಾಮ ಪಂಚಾಯತ್ ನ ಪಿ.ಡಿ.ಓ ರವರಾದ ಉಮಾಶಂಕರ್ ಮತ್ತು ದ್ವಿತೀಯ ದರ್ಜೆ ಗುಮಾಸ್ತ. ಶೇಖರ್ ಜಿ. ಇವರುಗಳು ರೂ.22,000/- ಲಂಚದ ಹಣವನ್ನು ಸ್ವೀಕರಿಸುವಾಗ ಗಂಗೊಳ್ಳಿ ಗ್ರಾಮ ಪಂಚಾಯತ್‌ನ ಕಚೇರಿಯಲ್ಲಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಆರೋಪಿತ ಅಧಿಕಾರಿಗಳನ್ನು ವಶಕ್ಕೆ ಪಡೆದು ತನಿಖೆ ಕೈಗೊಳ್ಳಲಾಗಿರುತ್ತದೆ.
ಈ ಕಾರ್ಯಾಚರಣೆಯಲ್ಲಿ ಶ್ರೀ. ಎಂ.ಎ ನಟರಾಜ, ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ ಮಂಗಳೂರು ರವರ ಮಾರ್ಗದರ್ಶನದಲ್ಲಿ, ಮಂಜುನಾಥ, ಪ್ರಭಾರ ಪೊಲೀಸ್ ಉಪಾಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ಉಡುಪಿರವರು ಹಾಗೂ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀ.ಅಮಾನುಲ್ಲಾ.ಎ, ಶ್ರೀ.ಚಂದ್ರಶೇಖರ್ ಕೆ.ಎನ್ ಇವರು ಮಂಗಳೂರು ಮತ್ತು ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಯ ಸಿಬ್ಬಂದಿಗಳ ಜೊತೆ ಟ್ರ್ಯಾಪ್ ಕಾರ್ಯಾಚರಣೆ ಕೈಗೊಂಡಿರುತ್ತಾರೆ.