ವಿಟ್ಲ:(ಜ.23) ವಿಟ್ಲ ಬೋಳಂತೂರಿನ ಉದ್ಯಮಿಯ ಮನೆಯಲ್ಲಿ, ಇ ಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ದರೋಡೆ ಮಾಡಿದ ಪ್ರಕರಣದಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರಿಂದ ಅಂತರಾಜ್ಯ ದರೋಡೆಕೋರನ ಬಂಧನ, ಕಾರು, ನಗದು ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಮಂಗಳೂರು: ಮಸಾಜ್ ಸೆಂಟರ್ನಲ್ಲಿ ದಾಂಧಲೆ ಪ್ರಕರಣ
ಬಂಟ್ವಾಳ ತಾಲೂಕು, ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಂತೂರು ನಾರ್ಶ ಎಂಬಲ್ಲಿ, ಉದ್ಯಮಿಯೊಬ್ಬರ ಮನೆಗೆ 06 ಜನ ಅಪರಿಚಿತರು ಇ ಡಿ ಅಧಿಕಾರಿಗಳೆಂದು ನಂಬಿಸಿ, ಮನೆಯ ಶೋಧನೆ ನಡೆಸಿ, ಸುಮಾರು 30 ಲಕ್ಷ ನಗದನ್ನು ದರೋಡೆ ಮಾಡಿ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 02/2025 ರಂತೆ ಪ್ರಕರಣ ದಾಖಲಿಸಿಕೊಂಡು, ಮಾನ್ಯ ಪೊಲೀಸ್ ಅಧೀಕ್ಷಕರಾದ ಶ್ರೀ ಯತೀಶ್ ಎನ್, ಐ.ಪಿ.ಎಸ್ ರವರ ಅದೇಶದ ಮೇರೆಗೆ, ಆರೋಪಿಗಳ ಪತ್ತೆಗಾಗಿ ನಾಲ್ಕು ವಿಶೇಷ ತನಿಖಾ ತಂಡ ರಚಿಸಿ, ಅಪರಾಧಿಗಳ ಪತ್ತೆಗಾಗಿ ಕಾರ್ಯಾಚರಣೆ ನಡೆಸಲಾಗಿ, ದಿನಾಂಕ:23-01-2025 ರಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತನಾದ
ಅನಿಲ್ ಫರ್ನಾಂಡಿಸ್ ಪ್ರಾಯ 49 ವರ್ಷ, ವಾಸ:ಯಸುದಾಸ್ ಲಿಯೋನ್ ಫರ್ನಾಂಡಿಸ್ , ಟ್ರಿನಿಟಿ ವಿಲ್ಲಾ ಚಿರಕರ್ ಜಂಕ್ಷನ್ ಮಾತಿಲಿಲ್ ಅಂಚೆ, ತ್ರಿಕ್ಕಡವೂರ್ ,ಪೆರಿನಾಡ್, ಕೊಲ್ಲಂ ಜಿಲ್ಲೆ ಕೇರಳ ರಾಜ್ಯ.
ಹಾಲಿ ವಾಸ:ಪಲವಿಲ್ಲ ಮನೆ, ಮಾತಿಲಿಲ್, ಅಂಚೆ ತ್ರಿಕ್ಕಡವೂರ್ ಪೆರಿನಾಡ್, ಕೊಲ್ಲಂ ಜಿಲ್ಲೆ ಕೇರಳ ರಾಜ್ಯ ಎಂಬಾತನನ್ನು ಬಂಧಿಸಿ, ಕೃತ್ಯಕ್ಕೆ ಉಪಯೋಗಿಸಿದ KL-02-BP-1104ನೇ ನೊಂದಣಿ ನಂಬ್ರದ ಎರ್ಟಿಗಾ ಕಾರು, 5,00,000/-ರೂ ನಗದು ಹಾಗೂ ನಕಲಿ ಕೃತ್ಯ ನಡೆಸುವಾಗ ಕಾರಿಗೆ ಅಳವಡಿಸಿದ್ದ ನಕಲಿ TN-20-DB-5517ನೇ ನಂಬರ ಪ್ಲೇಟ್ನ್ನು ವಶಪಡಿಸಿಕೊಂಡಿದ್ದು, ಸ್ವಾದೀನಪಡಿಸಿಕೊಂಡ ನಗದು ಹಾಗೂ ವಾಹನದ ಒಟ್ಟು ಮೌಲ್ಯ- 11,00,000/- ರೂ ಆಗಬಹುದು. ಸದ್ರಿ ಪ್ರಕರಣದಲ್ಲಿ ಉಳಿದ ಆರೋಪಿಗಳ ದಸ್ತಗಿರಿಗೆ ಬಾಕಿ ಇರುತ್ತದೆ.
ಆರೋಪಿಯ ಪತ್ತೆ ಕಾರ್ಯಾಚರಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ವಿವಿಧ ಠಾಣೆಗಳಿಂದ, ಅಪರಾಧ ಪ್ರಕರಣಗಳಲ್ಲಿ ನುರಿತ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಒಳಗೊಂಡ ನಾಲ್ಕು ವಿಶೇಷ ತನಿಖಾ ತಂಡ ಕಾರ್ಯನಿರ್ವಹಿಸಿರುತ್ತದೆ.