ಚಾಮರಾಜನಗರ :(ಜ.25) ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಕಿಟಿಕಿಯಿಂದ ತಲೆ ಹೊರ ಹಾಕಿದ್ದು, ಎದುರಿಗೆ ಬಂದ ಲಾರಿಯೊಂದು ತಲೆಯನ್ನೇ ಕತ್ತರಿಸಿಕೊಂಡು ಹೋಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ.
ಇದನ್ನೂ ಓದಿ: ಬೆಳ್ತಂಗಡಿ: ಸೌತಡ್ಕ ದೇವಸ್ಥಾನದ ಹರಕೆ ಗಂಟೆ ಹಗರಣ ಮತ್ತು ಹುಂಡಿ ಹಣದ ಅವ್ಯವಹಾರ ಕುರಿತು
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಿಂದ ನಂಜನಗೂಡು ಕಡೆಗೆ ಹೊರಟ್ಟಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ತಮ್ಮ ತಲೆಯನ್ನು ಕಿಟಕಿಯಿಂದ ಹೊರ ಹಾಕಿದ್ದ ವೇಳೆ ಮುಂಭಾಗದಿಂದ ವೇಗವಾಗಿ ಬಂದ ಲಾರಿಯೊಂದು ಮಹಿಳೆಯ ದೇಹದಿಂದ ರುಂಡವನ್ನು ಬೇರ್ಪಡಿಸಿದೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದು ಲಾರಿಯ ಪತ್ತೆ ಮಾಡುವ ಕಾರ್ಯಕ್ಕೆ ಮುಂದಾಗಿದ್ದಾರೆ.