Sat. Jan 3rd, 2026

Chikkamagalore: ಚಾರ್ಮಾಡಿ ಘಾಟಿಯಲ್ಲಿ ಭಾರೀ ಕಾಡ್ಗಿಚ್ಚು

ಚಿಕ್ಕಮಗಳೂರು:(ಜ.25) ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇವಾಲಯ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಇದನ್ನೂ ಓದಿ: ಕಾಸರಗೋಡು: ಫೆ.2 ರಂದು ಮದುವೆ ಫಿಕ್ಸ್‌

ಗಾಳಿಯ ವೇಗಕ್ಕೆ ಬೆಂಕಿ ಹೆಚ್ಚುತ್ತಲಿದ್ದು, ಇನ್ನಷ್ಟು ಪ್ರದೇಶಕ್ಕೆ ವ್ಯಾಪಿಸುತ್ತಿದೆ. ಕಾಡ್ಗಿಚ್ಚು ನಿಯಂತ್ರಿಸಲು ಅರಣ್ಯ ಇಲಾಖೆ, ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಶುಕ್ರವಾರ ರಾತ್ರಿಯಿಂದ ಬೆಂಕಿ ಹೊತ್ತಿಕೊಂಡಿದೆ.

ನಾಲ್ಕು ದಿನಗಳ ಹಿಂದೆ ಚಾರ್ಮಾಡಿ ಘಾಟಿಯ ಬಿದಿರುತಳ ಗ್ರಾಮದಲ್ಲಿ ಕಾಣಿಸಿಕೊಂಡಿತ್ತು. 500ಕ್ಕೂ ಅಧಿಕ ಅರಣ್ಯ ಪ್ರದೇಶ ಕಾಡ್ಗಿಚ್ಚಿಗೆ ಭಸ್ಮವಾಗಿತ್ತು.

Leave a Reply

Your email address will not be published. Required fields are marked *