ಮಂಗಳೂರು:(ಜ.25) ಮಂಗಳೂರು ಬಿಜೈ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಬಳಿಯಿರುವ ಕಲರ್ಸ್ ಯೂನಿಸೆಕ್ಸ್ ಸೆಲೂನ್ ಮೇಲೆ ರಾಮ ಸೇನೆ ಸಂಸ್ಥಾಪಕ ಪ್ರಸಾದ್ ಅತ್ತಾವರ ನಾಯಕತ್ವದ ಗ್ಯಾಂಗ್ ಜ.23 ರಂದು ದಾಳಿ ನಡೆಸಿತ್ತು.
ಇದನ್ನೂ ಓದಿ: ಬೆಂಗಳೂರು: ಬಿಗ್ ಬಾಸ್ - 11ರ ಮಾಜಿ ಸ್ಪರ್ಧಿ ಲಾಯರ್ ಜಗದೀಶ್ ಅರೆಸ್ಟ್!!
ಮಸಾಜ್ ಸೆಂಟರ್ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ 14 ಮಂದಿಗೆ ನ್ಯಾಯಾಲಯ ಫೆಬ್ರವರಿ 7ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಕರ್ನಾಟಕ ಗೃಹ ಸಚಿವ ಜಿ.ಪರಮೇಶ್ವರ ಅವರು, ಸಂಬಂಧಪಟ್ಟವರನ್ನು ಕೂಡಲೇ ಬಂಧಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಿರುವುದಾಗಿ ಹೇಳಿದ್ದರು.
ಇನ್ನು ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆ ನಡೆದ ಕೂಡಲೇ ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದ ಪೊಲೀಸರು 14 ಮಂದಿಯನ್ನು ಬಂಧಿಸಿದ್ದರು.