Mon. Jan 27th, 2025

Mangaluru: ಮುಡಿಪುವಿನ ಚರ್ಚ್ ಗೆ ನುಗ್ಗಿ ಕಾಣಿಕೆ ಹಣ ಕಳವು!!

ಮಂಗಳೂರು (ಜ.26): ಮುಡಿಪುವಿನಲ್ಲಿರುವ ಸಂತ ಜೋಸೆಫ್ ವಾಝ್ ಚರ್ಚ್ ಗೆ ಕಳ್ಳನೋರ್ವ ನುಗ್ಗಿ ಪರಮಪ್ರಸಾದ ಇಡುವ ಪೆಟ್ಟಿಗೆಯನ್ನು ಒಡೆದು ಪರಮಪ್ರಸಾದ ಹಂಚುವ ವಸ್ತುಗಳನ್ನು ಹಾಗೂ ಕಾಣಿಕೆಗೆ ಹಾಕಿರುವ ಹಣವನ್ನು ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಮಂಗಳೂರು: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯಕ್ಷಗಾನ ಕಲಾವಿದ ಆನಂದ ಕಟೀಲು ಚಿಕಿತ್ಸೆ ಫಲಕಾರಿಯಾಗದೆ ಸಾವು!!

ಜನವರಿ 24ರಂದು ರಾತ್ರಿ ಕಳ್ಳ ಚರ್ಚ್ ನ ಬಾಗಿಲು ಮುರಿದು ಒಳನುಗ್ಗಿದ್ದಾನೆ. ಕಳ್ಳ ತಲೆಗೆ ಬಟ್ಟೆ ಕಟ್ಟಿ ಮುಖಕ್ಕೆ ಮಾಸ್ಕ್ ಧರಿಸಿದ್ದ. ಕಳ್ಳತನ ನಡೆಸಿರುವ ಘಟನೆ ಬೆಳಕಿಗೆ ಬಂದ ಕೂಡಲೇ ಚರ್ಚ್ ನ ಪದಾಧಿಕಾರಿಗಳು ಪೊಲೀಸರ ಗಮನಕ್ಕೆ ತಂದಿದ್ದಾರೆ.

ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ ಹಾಗೂ ಸಿಸಿಟಿವಿಯ ಆಧಾರದಲ್ಲಿ ಕಳ್ಳನ ಸೆರೆಗೆ ಪೊಲೀಸರು ಬಲೆ ಬೀಸಿದ್ದಾರೆ. ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು