ಬೆಳ್ತಂಗಡಿ:(ಜ.27) ಲಾರಿ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ನಡೆದಿದೆ.

ಇದನ್ನೂ ಓದಿ: ಮಂಗಳೂರು: ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ನಿಧನಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಸಂತಾಪ
ಮೂಡಿಗೆರೆಯಿಂದ ಉಜಿರೆ ಕಡೆ ಬರುತ್ತಿದ್ದ ಕಾರು ಹಾಗೂ ಕೊಟ್ಟಿಗೆಹಾರ ಕಡೆ ತೆರಳುತ್ತಿದ್ದ ಲಾರಿ ಡಿಕ್ಕಿಯಾಗಿದ್ದು,

ಕಾರಿನಲ್ಲಿ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಹಂಪೆಯ ವೇದಮ್ಮ (55ವ) , ಜ್ಞಾನಮ್ಮ(70ವ), ಮಂಜುಳಾ(50ವ) ಮತ್ತು ರೇಣುಕಾ(26ವ) ಗಂಭೀರವಾಗಿ ಗಾಯಗೊಂಡಿದ್ದು, ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.


ಕಾರಿನಲ್ಲಿದ್ದ ಚಾಲಕ ಮತ್ತು ಇಬ್ಬರು ಮಕ್ಕಳು ಯಾವುದೇ ರೀತಿಯ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ.
