Fri. Jan 31st, 2025

Bengaluru: ಭಾವಿಪತ್ನಿ ಜೊತೆ ಮೊದಲ ಬಾರಿಗೆ ಕಾಣಿಸಿಕೊಂಡ ಸಂಸದ ತೇಜಸ್ವಿ ಸೂರ್ಯ – ರವಿಶಂಕರ್ ಗುರೂಜಿರವರ ಆಶೀರ್ವಾದ ಪಡೆದ ಜೋಡಿ

ಬೆಂಗಳೂರು:(ಜ.27) ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ತಮ್ಮ ಭಾವಿಪತ್ನಿ ಸಿವಶ್ರೀ ಸ್ಕಂದ ಪ್ರಸಾದ್ ಜೊತೆ ಸೇರಿ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ ಆಶೀರ್ವಾದ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: Saif Ali Khan: ಸೈಫ್ ಅಲಿ ಖಾನ್ ಮೇಲಿನ ದಾಳಿ ಪ್ರಕರಣ

ಬೆಂಗಳೂರಿನ ಹೊರ ವಲಯದಲ್ಲಿರುವ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಭಾವಿ ಪತ್ನಿ ಸಿವಶ್ರೀ ಸ್ಕಂದ ಪ್ರಸಾದ್ ಜೊತೆ ಸಂಸದ ತೇಜಸ್ವಿ ಸೂರ್ಯ ಭೇಟಿ ನೀಡಿದ್ದರು. ಈ ವೇಳೆ ರವಿಶಂಕರ್ ಗುರೂಜಿ ಅವರ ಆಶೀರ್ವಾದ ಪಡೆದುಕೊಂಡಿದ್ದಾರೆ. ಗುರೂಜಿ ಅವರು ಇಬ್ಬರಿಗೂ ಶುಭ ಹಾರೈಸಿದ್ದಾರೆ.

ಬಿಜೆಪಿಯ ಯುವ ಸಂಸದರಾದ ತೇಜಸ್ವಿ ಸೂರ್ಯ ಅವರು ಚೆನ್ನೈ ಮೂಲದ ಗಾಯಕಿ, ನಟಿ ಸಿವಶ್ರೀ ಸ್ಕಂದ ಪ್ರಸಾದ್ ಅವರ ಜೊತೆ ವಿವಾಹವಾಗಲಿದ್ದಾರೆ ಎಂದು ಇತ್ತೀಚೆಗಷ್ಟೇ ಹೇಳಲಾಗಿತ್ತು. ಇದರ ಬೆನ್ನಲ್ಲೇ ಇಬ್ಬರು ನಗರದ ಹೊರ ಹೊಲಯದಲ್ಲಿರುವ ಆರ್ಟ್ ಆಫ್ ಲಿವಿಂಗ್​ ಆಶ್ರಮದಲ್ಲಿ ಒಟ್ಟಿಗೆ ಕಾಣಿಸಿಕೊಂಡಿರುವುದು ವಿಶೇಷ ಎನಿಸಿತು.

ಸಿವಶ್ರೀ ಸ್ಕಂದ ಪ್ರಸಾದ್ ಅವರು ಗಾಯಕಿ ಆಗಿದ್ದು ಹಾಡುಗಳನ್ನು ಉತ್ತಮವಾಗಿ ಹಾಡುತ್ತಾರೆ. ಇದರ ಜೊತೆಗೆ ಹರಿಕಥೆ, ಭಜನೆ, ಸೈಕ್ಲಿಂಗ್, ವಾಕ್​ಥಾನ್ ಮೂಲಕ ಕಾರ್ಯಕ್ರಮದಲ್ಲಿ ನೆರೆದ ಎಲ್ಲರ ಗಮನ ಸೆಳೆಯಬಲ್ಲರು. ಇದರ ಜೊತೆ ಈ ಯುವ ಜೋಡಿಯ ವಿವಾಹ ಸಮಾರಂಭವು 2025ರ ಮಾರ್ಚ್​ 4 ರಂದು ನಿಶ್ಚಯವಾಗಿದೆ.

Leave a Reply

Your email address will not be published. Required fields are marked *