ಬೆಳ್ತಂಗಡಿ:(ಜ.31) ಕೇರಳದ ತಿರುವನಂತಪುರದ ಅನಂತಪದ್ಮನಾಭಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕರಾಗಿ ದಕ್ಷಿಣ ಕನ್ನಡ ಜಿಲ್ಲೆಯ ಅರ್ಚಕರು ನೇಮಕಗೊಂಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕೊಕ್ಕಡ ನಿವಾಸಿ ಸತ್ಯನಾರಾಯಣ ತೋಡ್ತಿಲ್ಲಾಯ (45 ವ) ಇದೀಗ ದೇಶದ ಅತೀ ಶ್ರೀಮಂತ ದೇವಸ್ಥಾನಕ್ಕೆ ಮಹಾ ಪ್ರಧಾನ ಅರ್ಚಕರಾಗಿ ಆಯ್ಕೆಯಾಗಿದ್ದಾರೆ. ಇದೀಗ ಅವರು ದೇವಸ್ಥಾನದಿಂದ ನೀಡಲಾಗುವ ಛತ್ರಿ ಮರ್ಯಾದೆ ಸ್ವೀಕರಿಸುವ ಮಹಾ ಪ್ರಧಾನ ಅರ್ಚಕ ಸ್ಥಾನವನ್ನು ಅಲಂಕರಿಸಲಿದ್ದಾರೆ.



ಸತ್ಯನಾರಾಯಣ ತೋಡ್ತಿಲ್ಲಾಯ ಮೂಲತಃ ಕೊಕ್ಕಡ ಗ್ರಾಮದ ಬಡೆಕ್ಕರ ನಿವಾಸಿಯಾಗಿದ್ದಾರೆ. ಇವರು ದಿ. ಸುಬ್ರಾಯ ತೋಡ್ತಿಲ್ಲಾಯ ಮತ್ತು ದಿ.ಯಶೋಧ ದಂಪತಿಗಳ ಪುತ್ರ. ಕಳೆದ 20 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿರುವ ನಾರಾಯಣ ತೋಡ್ತಿಲ್ಲಾಯರು, ಪಾಲಾಲೆ ದಿ. ಸತೀಶ ಯಡಪಡಿತ್ತಾಯ ಅವರ ಬಳಿ ವೇದ ಅಭ್ಯಾಸವನ್ನು ಮಾಡಿದ್ದಾರೆ.
