Tue. Mar 25th, 2025

Sachin Tendulkar: ಸಚಿನ್ ತೆಂಡೂಲ್ಕರ್ ಕಿರೀಟಕ್ಕೆ ಜೀವಮಾನ ಸಾಧನೆ ಪ್ರಶಸ್ತಿ ಗರಿ

Sachin Tendulkar:(ಜ.31) ಫೆಬ್ರವರಿ 1 ರಂದು ನಡೆಯುವ ಬಿಸಿಸಿಐ ವಾರ್ಷಿಕ ಪ್ರಶಸ್ತಿ ಸಮಾರಂಭದಲ್ಲಿ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಲಾಗುವುದು ಎಂದು ವರದಿಯಾಗಿದೆ. ತಮ್ಮ ಅದ್ಭುತ ಅಂತರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನದಲ್ಲಿ ಅನೇಕ ದಾಖಲೆಗಳನ್ನು ಸೃಷ್ಟಿಸಿರುವ ಸವ್ಯಸಾಚಿ ಸಚಿನ್ ಅವರ ಸಾಧನೆಯ ಕಿರೀಟಕ್ಕೆ ಇದೀಗ ಈ ಪ್ರಶಸ್ತಿಯೊಂದು ಸೇರುತ್ತಿದೆ. ಸಚಿನ್ ಇದುವರೆಗೆ ಭಾರತ ರತ್ನ ಸೇರಿದಂತೆ ಹಲವು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದ್ದಾರೆ.

ಇದನ್ನೂ ಓದಿ: ಮಂಗಳೂರು: ಮಸಾಜ್‌ ಪಾರ್ಲರ್‌ ಕೇಸ್‌ ನಲ್ಲಿ ಅರೆಸ್ಟ್‌ ಆದ ಪ್ರಸಾದ ಅತ್ತಾವರ ಮೊಬೈಲ್‌ ನಲ್ಲಿ ಸ್ಫೋಟಕ ಅಂಶ ಪತ್ತೆ!!

ಫೆಬ್ರವರಿ 1 ರಂದು ಅಂದರೆ ನಾಳೆ ನಡೆಯಲ್ಲಿರುವ ಬಿಸಿಸಿಐ ವಾರ್ಷಿಕ ಪ್ರಶಸ್ತಿ ಸಮಾರಂಭದಲ್ಲಿ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಜೀವಮಾನ ಸಾಧನೆ ಪ್ರಶಸ್ತಿಗೆ ಭಾಜನರಾಗಲಿದ್ದಾರೆ ಎಂದು ವರದಿಯಾಗಿದೆ. 2013 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಮಾಸ್ಟರ್ ಬ್ಲಾಸ್ಟರ್ ತಮ್ಮ ವೃತ್ತಿ ಬದುಕಿನಲ್ಲಿ ಮುರಿಯಲಾಗದಂತಹ ಹಲವು ದಾಖಲೆಗಳನ್ನು ಸೃಷ್ಟಿಸಿದ್ದಾರೆ.

ಕ್ರಿಕೆಟ್ ಲೋಕದಲ್ಲಿ ತನ್ನದೇಯಾದಂತಹ ಕೋಟ್ಯಾಂತರ ಅಭಿಮಾನಿ ಬಳಗವನ್ನು ಹೊಂದಿರುವ ಸಚಿನ್ ತೆಂಡೂಲ್ಕರ್​ಗೆ ನಾನಾ ಪ್ರಶಸ್ತಿಗಳು ಒಲಿದು ಬಂದಿವೆ. ಇದೀಗ ಮುಂಬೈನಲ್ಲಿರುವ ಕೇಂದ್ರ ಕಚೇರಿಯಲ್ಲಿ ನಡೆಯಲ್ಲಿರುವ ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಚಿನ್​ ತೆಂಡೂಲ್ಕರ್​ಗೆ ಬಿಸಿಸಿಐ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಿದೆ. ಕಳೆದ ವರ್ಷ ನಡೆದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರವಿಶಾಸ್ತ್ರಿ ಮತ್ತು ಮಾಜಿ ಅನುಭವಿ ವಿಕೆಟ್‌ಕೀಪರ್ ಫಾರೂಕ್ ಇಂಜಿನಿಯರ್ ಕರ್ನಲ್ ಸಿಕೆ ನಾಯುಡು ಜೀವಮಾನ ಸಾಧನೆ ಪ್ರಶಸ್ತಿಯನ್ನು ಸ್ವೀಕರಿಸಿದ್ದರು.

ಭಾರತ ರತ್ನ ಸಚಿನ್​ ತೆಂಡೂಲ್ಕರ್
ಸಚಿನ್ ಈ ಹಿಂದೆ ಭಾರತದ ಅತ್ಯುನ್ನತ ಗೌರವ ಭಾರತ ರತ್ನವನ್ನು ಪಡೆದಿದ್ದಾರೆ. ಇದಲ್ಲದೆ, ಅವರು ಅರ್ಜುನ್ ಪ್ರಶಸ್ತಿ, ಖೇಲ್ ರತ್ನ, ಪದ್ಮಶ್ರೀ, ಪದ್ಮವಿಭೂಷಣ ಮತ್ತು ಮಹಾರಾಷ್ಟ್ರ ಭೂಷಣ ಪ್ರಶಸ್ತಿಗಳಿಗೂ ಭಾಜನರಾಗಿದ್ದಾರೆ. ಹಾಗೆಯೇ ಐಸಿಸಿ ಮತ್ತು ಬಿಸಿಸಿಐ ಕೂಡ ಸಚಿನ್‌ಗೆ ಹಲವು ಕ್ರೀಡಾ ಪ್ರಶಸ್ತಿಗಳನ್ನು ನೀಡಿ ಗೌರವಿಸಿವೆ.

ಸಚಿನ್ ವೃತ್ತಿ ಬದುಕು
ಸಚಿನ್ ಭಾರತದ ಪರ 1 ಟಿ20, ದಾಖಲೆಯ 200 ಟೆಸ್ಟ್ ಮತ್ತು 463 ಏಕದಿನ ಅಂದರೆ ಒಟ್ಟು 664 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಈ ಅವಧಿಯಲ್ಲಿ ಅವರು ಟೆಸ್ಟ್‌ನಲ್ಲಿ 15921 ರನ್, ಏಕದಿನದಲ್ಲಿ 18426 ರನ್ ಗಳಿಸಿ ದಾಖಲೆ ಬರೆದಿದ್ದಾರೆ. ಸಚಿನ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 100 ಶತಕ ಸಿಡಿಸಿದ ದಾಖಲೆ ಕೂಡ ಇದೆ. ಈ ಕಾರಣಕ್ಕಾಗಿಯೇ ಬಿಸಿಸಿಐ ಅವರಿಗಾಗಿ ಈ ದೊಡ್ಡ ಪ್ರಶಸ್ತಿ ನೀಡಿ ಗೌರವಿಸುತ್ತಿದೆ.

Leave a Reply

Your email address will not be published. Required fields are marked *