Sun. Feb 2nd, 2025

Agriculture Budget 2025: ಬಜೆಟ್​ನಲ್ಲಿ ಕೃಷಿ ಕ್ಷೇತ್ರಕ್ಕೆ ಹಲವು ಕೊಡುಗೆಗಳನ್ನು ಪ್ರಕಟಿಸಿದ ನಿರ್ಮಲಾ ಸೀತಾರಾಮನ್ !!

ನವದೆಹಲಿ, (ಫೆ.1): ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿದ ರೈತರಿಗೆ ನೀಡಲಾಗುವ ಕಿರು ಸಾಲದ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಮೂರು ಲಕ್ಷ ರೂ ಇದ್ದ ಸಾಲದ ಮಿತಿಯನ್ನು ಐದು ಲಕ್ಷ ರೂಗೆ ಏರಿಸಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಎಂಟನೇ ಬಜೆಟ್​ನಲ್ಲಿ ಈ ಘೋಷಣೆ ಮಾಡಿದ್ದಾರೆ. ಏಳು ಕೋಟಿಗೂ ಹೆಚ್ಚು ರೈತರು ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿದ್ದು, ಅವರಿಗೆ ಬಹಳ ಕಡಿಮೆ ಬಡ್ಡಿದರದಲ್ಲಿ ಸಾಲ ಸಿಗುತ್ತದೆ.

ಇದನ್ನೂ ಓದಿ: Mangaluru: ಸ್ನೇಹಮಯಿ ಕೃಷ್ಣ ಮತ್ತು ಗಂಗರಾಜು ಫೋಟೋಗೆ ರಕ್ತಾಭಿಷೇಕ ಮಾಡಿದ ಪ್ರಕರಣಕ್ಕೆ ರೋಚಕ ಟ್ವಿಸ್ಟ್

ಬೇಳೆ ಕಾಳುಗಳಲ್ಲಿ ಸ್ವಾವಲಂಬನೆಗೆ 6 ವರ್ಷದ ಮಿಷನ್:
ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್​ನಲ್ಲಿ ಕೃಷಿ ಕ್ಷೇತ್ರಕ್ಕೆ ಒತ್ತು ಕೊಡುತ್ತಿರುವುದಾಗಿ ತಿಳಿಸಿದ್ದಾರೆ. ಬೇಳೆಕಾಳು ಇತ್ಯಾದಿಯಲ್ಲಿ ಸ್ವಾವಲಂಬನೆ ಸಾಧಿಸುವ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಬೇಳೆಕಾಳುಗಳಲ್ಲಿ ಸ್ವಾವಲಂಬನೆ ಸಾಧಿಸುವ ಆರು ವರ್ಷದ ಮಿಷನ್ ಅನ್ನು ಅವರು ಪ್ರಕಟಿಸಿದ್ದಾರೆ. ರಾಷ್ಟ್ರೀಯ ಕೃಷಿ ಮಾರುಕಟ್ಟೆ ಸಂಸ್ಥೆಗಳಾದ ಎನ್​ಎಎಫ್​ಇಇ, ಎನ್​ಸಿಸಿಎಫ್ ಇತ್ಯಾದಿ ಸಂಸ್ಥೆಗಳೊಂದಿಗೆ ರೈತರು ಒಪ್ಪಂದ ಮಾಡಿಕೊಂಡು, ಬೇಳೆಕಾಳುಗಳನ್ನು ಮಾರಬಹುದು. ಇದರಿಂದ ರೈತರಿಗೆ ಸುಲಭ ಮಾರುಕಟ್ಟೆ ಸಿಕ್ಕಂತಾಗುತ್ತದೆ.

ಪಿಎಂ ಧನ್ ಧಾನ್ಯ ಕೃಷಿ ಯೋಜನೆ:
ಬಜೆಟ್​ನಲ್ಲಿ ಪಿಎಂ ಧನ್ ಧಾನ್ಯ್ ಕೃಷಿ ಯೋಜನೆಯನ್ನು ಪ್ರಕಟಿಸಲಾಗಿದೆ. ಕಡಿಮೆ ಉತ್ಪನ್ನ ಇರುವ 100 ಜಿಲ್ಲೆಗಳನ್ನು ಗುರಿಯಾಗಿಸಿ, ರಾಜ್ಯಗಳ ಸಹಭಾಗಿತ್ವದಲ್ಲಿ ಈ ಯೋಜನೆ ರೂಪಿಸಲಾಗಿದೆ. ಬಹುಬೆಳೆ, ಸುಸ್ಥಿರ ಕೃಷಿ ವಿಧಾನ, ನೀರಾವರಿ ಸೌಲಭ್ಯ, ಸಾಲ ಸೌಲಭ್ಯ ಇತ್ಯಾದಿ ಮೂಲಕ ಕೃಷಿ ಉತ್ಪನ್ನವನ್ನು ಹೆಚ್ಚಿಸುವುದು ಈ ಯೋಜನೆ ಗುರಿ. 1.7 ಕೋಟಿ ರೈತರ ಜೀವನಕ್ಕೆ ಇದರಿಂದ ಅನುಕೂಲವಾಗಲಿದೆ.

ಗ್ರಾಮೀಣ ಆರ್ಥಿಕತೆಗೆ ಇಂಡಿಯಾ ಪೋಸ್ಟ್ ಶಕ್ತಿ
ಇಂಡಿಯಾ ಪೋಸ್ಟ್ ಸಂಸ್ಥೆಯನ್ನು ದೊಡ್ಡ ಸಾರ್ವಜನಿಕ ಲಾಜಿಸ್ಟಿಕ್ ಸಂಸ್ಥೆಯಾಗಿ ಪರಿವರ್ತಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ. ಗ್ರಾಮೀಣ ಭಾಗದಲ್ಲಿರುವ ಒಂದೂವರೆ ಲಕ್ಷ ಅಂಚೆ ಕಚೇರಿಗಳನ್ನು ಇದಕ್ಕಾಗಿ ಬಳಕೆ ಮಾಡಲಾಗುತ್ತದೆ. ಇದರಿಂದ ಗ್ರಾಮೀಣ ಆರ್ಥಿಕತೆಗೆ ಅನುಕೂಲವಾಗಲಿದೆ.

Leave a Reply

Your email address will not be published. Required fields are marked *