Mon. Feb 3rd, 2025

Mangaluru: ಹಲವು ಕೇಸ್‌ ನಲ್ಲಿ ಪೋಲಿಸರಿಗೆ ಬೇಕಾಗಿದ್ದ ಆರೋಪಿ ಭರತ್‌ ಶೆಟ್ಟಿ ಅರೆಸ್ಟ್!!

ಮಂಗಳೂರು:(ಫೆ.3) ಹಲವು ಕೇಸ್‌ ನಲ್ಲಿ ಪೋಲಿಸರಿಗೆ ಬೇಕಾಗಿದ್ದ ಆರೋಪಿಯೊಬ್ಬನನ್ನು ಪೋಲಿಸರು ಅರೆಸ್ಟ್‌ ಮಾಡಿದ್ದಾರೆ. ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಸುರತ್ಕಲ್‌ ಇಡ್ಯಾ ಗ್ರಾಮದ ಕಾನ ಆಶ್ರಯ ಕಾಲೋನಿಯ ನಿವಾಸಿ ಭರತ್‌ ಶೆಟ್ಟಿ (27ವ) ಎಂಬಾತನನ್ನು ಸುರತ್ಕಲ್‌ ಪೋಲಿಸರು ಬಂಧಿಸಿದ್ದಾರೆ.

ಇದನ್ನೂ ಓದಿ: ⭕Sonu Nigam: ಆಸ್ಪತ್ರೆ ಸೇರಿದ ಸೋನು ನಿಗಮ್

ಆರೋಪಿ ಭರತ್‌ ಶೆಟ್ಟಿ ವಿರುದ್ಧ ಕಳೆದ ವರ್ಷ ಮೀಲಾದುನ್ನಬಿ ಸಂದರ್ಭ ಕಾಟಿಪಳ್ಳ 3 ನೇ ಬ್ಲಾಕ್‌ ನ ಮಸೀದಿಗೆ ಕಲ್ಲೆಸೆದ ಪ್ರಕರಣ, ಎಮ್ಮೆಕೆರೆ ನಿವಾಸಿ ರಾಹುಲ್‌ ಕೊಲೆ ಪ್ರಕರಣ ಸೇರಿದಂತೆ ಮಂಗಳೂರು ನಗರ ಪೋಲಿಸ್‌ ಕಮಿಷರನೇಟ್‌ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೋಲಿಸ್‌ ಠಾಣೆಗಳಲ್ಲಿ ಕೊಲೆ ,

ನಾಲ್ಕು ಕೊಲೆ ಯತ್ನ, ಡಕಾಯಿತಿ, ಕಾನೂನುಬಾಹಿರ ಸಭೆ, ಹಲ್ಲೆ ಮತ್ತು ಮಹಿಳೆಯರ ವಿರುದ್ಧದ ಅಪರಾಧಗಳು ಸೇರಿದಂತೆ ಒಟ್ಟು 13 ಗಂಭೀರ ಅಪರಾಧ ಪ್ರಕರಣಗಳು ದಾಖಲಾಗಿವೆ ಎಂದು ಮಂಗಳೂರು ಪೋಲಿಸ್‌ ಕಮಿಷನರ್‌ ಅನುಪಮ್‌ ಅಗರ್ವಾಲ್‌ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *