ಬಂಟ್ವಾಳ:(ಫೆ.4) ವಿಜಯಪುರ ಮೂಲದ ಆರೋಪಿಯೋರ್ವ ನರಿಕೊಂಬು ಗ್ರಾಮ ನಿವಾಸಿ ಅಪ್ರಾಪ್ತೆ ಬಾಲಕಿಯನ್ನು ಕಿಡ್ನಾಪ್ ಮಾಡಿ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು, ಪೊಲೀಸರು ಆಕೆಯನ್ನು ಬೆಂಗಳೂರಿನಲ್ಲಿ ಪತ್ತೆ ಮಾಡಿ ಕರೆತಂದಿರುವ ಜತೆಗೆ ಆರೋಪಿಯನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: ಬೆಳ್ತಂಗಡಿ: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ್ ತಾಲೂಕು ನಿವಾಸಿ ಲೇಬಗೇರಿ ನಿವಾಸಿ ರಾಮು ಗುಳಪ್ಪ ಮಾದರ್ ಎಂಬ ಆರೋಪಿಯು ಬಾಲಕಿಯನ್ನು 2024ರ ಅಕ್ಟೋಬರ್ 8ರಂದು ಆಕೆಯ ಮನೆಯಿಂದ ಅಪಹರಿಸಿಕೊಂಡು ಹೋಗಿದ್ದನು. ಈ ಕುರಿತು ಬಾಲಕಿಯ ತಂದೆ ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿಯು ಬಾಲಕಿಯನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದನು. ಪೊಲೀಸ್ ಸಿಬಂದಿ ಗಣೇಶ್, ನಾಗನಾಥ ಮತ್ತು ರೇವತಿ ಅವರು ನೊಂದ ಬಾಲಕಿಯನ್ನು ಬೆಂಗಳೂರಿನಲ್ಲಿ ಪತ್ತೆ ಮಾಡಿ ಕರೆ ತಂದಿದ್ದರು. ಜತೆಗೆ ಆರೋಪಿಯನ್ನೂ ಬಂಧಿಸಲಾಗಿತ್ತು. ತನಿಖೆ ವೇಳೆ ಆರೋಪಿಯು ಅಪ್ರಾಪ್ತೆ ಬಾಲಕಿಯ ಮೇಲೆ ಲೈಂಗಿಕ ಹಲ್ಲೆ ನಡೆಸಿರುವುದು ದೃಢಪಟ್ಟಿತ್ತು. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.